ಡಾ. ನಾಗೇಂದ್ರ 
ರಾಜ್ಯ

ವಿಧಾನಸೌಧದ ಮುಂದೆಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಕಾರಣ ಗೊತ್ತಾ?

ಇಂದು ಮಧ್ಯಾಹ್ನ ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಡಾ. ನಾಗೇಂದ್ರ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧದ ಮುಂದೆಯೇ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಇಂದು ಮಧ್ಯಾಹ್ನ ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಡಾ. ನಾಗೇಂದ್ರ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಶಕ್ತಿ ಕೇಂದ್ರದ ಮುಂದೆ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು?

ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಗುರುತಿಸಿದ್ದಕ್ಕೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಡಾ. ನಾಗೇಂದ್ರಪ್ಪ ಅವರು ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ.

ಡಾ. ನಾಗೇಂದ್ರಪ್ಪ ಮತ್ತು ಪುನೀತ್ ಕೆರೆಹಳ್ಳಿ ಇಬ್ಬರೂ ನಗರದಲ್ಲಿ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ತೋರಿಸಿದ್ದರು. ಈ ಹಿನ್ನಲೆಯಲ್ಲಿ ದೂರು ನೀಡಿದವರ ವಿರುದ್ಧವೇ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಅದಾದ ನಂತರ ಸೂಲದೇವನಹಳ್ಳಿ ಪೊಲೀಸರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಅವರು ಮನನೊಂದು ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಷ ಸೇವಿಸುವುದನ್ನು ಗಮನಿಸಿದ ವಿಧಾನಸೌಧ ಪೊಲೀಸರು ತಕ್ಷಣ ವಿಷದ ಬಾಟಲಿಯನ್ನು ಕಿತ್ತುಕೊಂಡು, ಡಾ. ನಾಗೇಂದ್ರಪ್ಪ ಅವರನ್ನು ಆಸ್ಪತ್ರೆಗೆ ರವಾನೆ ಮಾಡಿದ್ದು, ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!