ಬೆಂಗಳೂರು: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ವೃದ್ಧ ದಂಪತಿ ಪ್ರಯಾಣಿಸುತ್ತಿದ್ದ ಕಾರೊಂದು ಕೆಎಸ್ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿ ಮೂರ್ನಾಲ್ಕು ಪಲ್ಟಿಯಾದ ಘಟನೆ ನಡೆದಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳೆದ ಡಿಸೆಂಬರ್‌ನಲ್ಲಿ ರಾಮನಗರದ ಸಂಗಬಸವನದೊಡ್ಡಿ ಗ್ರಾಮದ ಬಳಿ ಈ ಅಪಘಾತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಸೀಟ್ ಬೆಲ್ಟ್ ಧರಿಸಿದ್ದರಿಂದ ದಂಪತಿ ವೃದ್ಧ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಮೂಲದ 84 ವರ್ಷದ ಅಬ್ದುಲ್ ಫಜಲ್ ತಮ್ಮ ಪತ್ನಿ ಜೊತೆ ಸಂಬಂಧಿಕರ ಮದುವೆಗೆ ಮೈಸೂರಿಗೆ ತೆರಳುತ್ತಿದ್ದರು.
ಈ ವೇಳೆ ಎಕ್ಸ್‌ಪ್ರೆಸ್‌ವೇ ಎಕ್ಸಿಟ್ ಬಳಿ ಬಸ್ ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದಿದೆ.
ಘಟನೆ ವೇಳೆ ವೃದ್ಧ ದಂಪತಿ ಸೀಟ್ ಬೆಲ್ಟ್ ಧರಿಸಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.