ಪೋಸ್ಟರ್ ಅಂಟಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು 
ರಾಜ್ಯ

ಬೈರತಿ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ಶಾಸಕ ಸುರೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಮನೆ ಮುಂದೆ ಪೋಸ್ಟರ್ ಅಂಟಿಸಿ ಪ್ರತಿಭಟನೆ

ಶುಕ್ರವಾರ ವಿಧಾನಸಭೆಯಲ್ಲಿ ಸುರೇಶ್ ಕುಮಾರ್ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನಾ ಸಚಿವ ಬೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಬೆಂಗಳೂರು: ಸಚಿವ ಬೈರತಿ ಸುರೇಶ್ ವಿರುದ್ಧ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ನೀಡಿರುವ ಅವಹೇಳನ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಸುರೇಶ್ ಕುಮಾರ್ ಅವರ ನಿವಾಸಕ್ಕೆ ಪೋಸ್ಟರ್ ಅಂಟಿಸಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ರಾಜಾಜಿನಗರದಲ್ಲಿರುವ ಸುರೇಶ್‌ ಕುಮಾರ್ ಅವರ ಮನೆಯ ಮುಂದೆ ಶನಿವಾರ ಬೆಳಿಗ್ಗೆ ಸೇರಿದ್ದ ಕಾಂಗ್ರೆಸ್‌ ಕಾರ್ಯಕರ್ತರು, ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಮನೆಯ ಗೋಡೆಗಳಿಗೆ ಪೋಸ್ಟರ್‌ಗಳನ್ನು ಅಂಟಿಸಿದರು.

ಶುಕ್ರವಾರ ವಿಧಾನಸಭೆಯಲ್ಲಿ ಸುರೇಶ್ ಕುಮಾರ್ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನಾ ಸಚಿವ ಬೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಶಾಸಕ ಸುರೇಶ್ ಕುಮಾರ್ ಅವರ ಕಾರು ಚಾಲಕ ಪುನೀತ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶಂಕರ್, ಮಂಜು, ನವೀನ್ ಮತ್ತು ಸಾಯಿ ಎಂಬ ನಾಲ್ವರನ್ನು ಬಂಧನಕ್ಕೊಳಪಡಿಸಿದ್ದಾರೆ. ನಾಲ್ವರೂ ಬಸವೇಶ್ವರನಗರದ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಕುರಿತು ಪ್ರತಿಕ್ರಿಯಿಸಿದ ಸುರೇಶ್ ಕುಮಾರ್ ಅವರು, ನಾನು ಬಳಸಿದ ಪದವು ಅವಹೇಳನಕಾರಿಯಾಗಿದ್ದು, ಅದನ್ನು ಸದನದ ಕಡತದಿಂದ ತೆಗೆದುಹಾಕಲಾಗಿದೆ. ಸದನದಲ್ಲೇ ಹೇಳಿಕೆ ಬಗ್ಗೆ ವಿಷಾದವನ್ನೂ ವ್ಯಕ್ತಪಡಿಸಿದ್ದೇನೆ. ಇದರೊಂದಿಗೆ ಈ ಅಧ್ಯಾಯ ಮುಕ್ತಾಯಗೊಂಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel