ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ 
ರಾಜ್ಯ

GBA ಚುನಾವಣೆ: ಮತದಾರ ಪಟ್ಟಿ ಖುದ್ದು ಪರಿಶೀಲಿಸಿ; ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ

ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹದ ಜೊತೆಗೆ ಚುನಾವಣಾ ಕೆಲಸಕ್ಕೆ ಆದ್ಯತೆ ನೀಡಬೇಕು. ಯಾವುದೇ ಲೋಪದೋಷಗಳಿಲ್ಲದೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯನ್ನು ಖುದ್ದು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು ಶನಿವಾರ ಸೂಚನೆ ನೀಡಿದ್ದಾರೆ.

ಟೌನ್ ಹಾಲ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದಂತೆ ಜನವರಿ 22 ರಂದು ರಾಜ್ಯ ಚುನಾವಣಾ ಆಯೋಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದೆ. ಅದರಂತೆ, ಎಲ್ಲಾ ಐದು ಪಾಲಿಕೆಗಳ ಅಧಿಕಾರಿಗಳಿಗೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಆಯಾ ಪಾಲಿಕೆ ಅಧಿಕಾರಿಗಳು ವಾರ್ಡ್ ಗಳಿಗೆ ಖುದ್ದಾಗಿ ಪರಿಶೀಲಿಸಬೇಕು. ಗೊಂದಲವನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದರು.

ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹದ ಜೊತೆಗೆ ಚುನಾವಣಾ ಕೆಲಸಕ್ಕೆ ಆದ್ಯತೆ ನೀಡಬೇಕು. ಯಾವುದೇ ಲೋಪದೋಷಗಳಿಲ್ಲದೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು,

ಮತದಾರರ ಪಟ್ಟಿ ಪರಿಷ್ಕರಣೆಯ ಸಮಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಪ್ರತಿ ಮನೆಗೆ ಭೇಟಿ ನೀಡುವುದನ್ನು ಮತ್ತು ಸೇರ್ಪಡೆ, ತಿದ್ದುಪಡಿ ಪ್ರಕ್ರಿಯೆಯನ್ನು ನಡೆಸುವಾಗ ಸಂಬಂಧಿತ ದಾಖಲೆಗಳಿರುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್