ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ನೆಲಮಂಗಲದ ಕುಖ್ಯಾತ ರೌಡಿಶೀಟರ್ ಆಟೋ ನಾಗ ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ಆಟೋ ನಾಗನ್ನು ದುಷ್ಕರ್ಮಿಗಳ ತಂಡ ಹತ್ಯೆ ಮಾಡಿ ಪರಾರಿಯಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.