ಕೇಂದ್ರ ಸಚಿವ ವಿ. ಸೋಮಣ್ಣ 
ರಾಜ್ಯ

ವಿಶ್ವದಲ್ಲೇ ಬೆಂಗಳೂರು ಟ್ರಾಫಿಕ್ ನಗರ: DCM ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಸೋಮಣ್ಣ ಕಿಡಿ!

ಐಟಿ–ಬಿಟಿ ಬಿಸಿನೆಸ್ ಕಾರಿಡಾರ್‌ಗಳತ್ತ ಜನರು ನಿರಂತರವಾಗಿ ಹರಿದು ಬರುತ್ತಿರುವುದೇ ಟ್ರಾಫಿಕ್ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

ಬೆಂಗಳೂರು: ವಿಶ್ವದಲ್ಲೇ ಬೆಂಗಳೂರಿನಲ್ಲಿ ಟ್ರಾಫಿಕ್ ಹೆಚ್ಚಳವಾಗಿದೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ದೇಶಗಳಲ್ಲಿ ಇರುವವರೆಲ್ಲಾ ಬೆಂಗಳೂರಿಗೆ ಬಂದು ವಾಸಿಸುತ್ತಿದ್ದಾರೆ. ಒಂದು ಬಾರಿ ಬೆಂಗಳೂರಿಗೆ ಬಂದವರು ಮತ್ತೆ ವಾಪಸ್ ತೆರಳುತ್ತಿಲ್ಲ. ಇಲ್ಲಿನ ವಾತಾವರಣ ಐಟಿ ಬಿಟಿ ಬ್ಯಸಿನೆಸ್ ಕಾರಿಡಾರ್ ಗೆ ಜನ ಮುಗಿ ಬೀಳ್ತಿದ್ದಾರೆ. ಅದನ್ನ ದೃಷ್ಟಿಯಲ್ಲಿ ಇಟ್ಟುಕೊಂಡು ಅಭಿವೃದ್ಧಿ ಕೆಲಸಗಳನ್ನ ಮಾಡಬೇಕು. ಅದನ್ನ ಬಿಟ್ಟು ಕೇವಲ ಟೀಕೆಗಳನ್ನ ಮಾಡಿಕೊಂಡು ಸಮಯ ವ್ಯರ್ಥ ಮಾಡೋದು. ಅಂಡರ್ ಗ್ರೌಂಡ್ ಮಾಡ್ತೀನಿ ಅಂತ ಕಾಲಾಹರಣ ಮಾಡೋದು ರಾಜಕೀಯವಲ್ಲ ಎಂದು ಅಂತ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ದ ಕಿಡಿಕಾರಿದರು.

ಬೆಂಗಳೂರಿನ ಉತ್ತಮ ವಾತಾವರಣ, ಐಟಿ–ಬಿಟಿ ಉದ್ಯಮಗಳು ಹಾಗೂ ವ್ಯಾಪಾರಿಕ ಅವಕಾಶಗಳು ಜನರನ್ನು ಹೆಚ್ಚಾಗಿ ಆಕರ್ಷಿಸುತ್ತಿವೆ. ಐಟಿ–ಬಿಟಿ ಬಿಸಿನೆಸ್ ಕಾರಿಡಾರ್‌ಗಳತ್ತ ಜನರು ನಿರಂತರವಾಗಿ ಹರಿದು ಬರುತ್ತಿರುವುದೇ ಟ್ರಾಫಿಕ್ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.

ಇದೇ ವೇಳೆ ಬೆಂಗಳೂರು ಉಪ ನಗರ ರೈಲ್ವೆ ಯೋಜನೆ ಕುರಿತು ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ಹಿಂದೆ ನಾನು ಮೂಲಸೌಕರ್ಯ ಸಚಿವನಾಗಿದ್ದ ಸಂದರ್ಭದಲ್ಲಿ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆ ಕುರಿತು ಪ್ರಧಾನಮಂತ್ರಿಗಳ ಬಳಿ ನಾವು ಮನವಿ ಸಲ್ಲಿಸಿದ್ದೆವು. ಈಗ ಈ ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತಲುಪಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಚರ್ಚೆ ನಡೆದಿದೆ” ಎಂದು ತಿಳಿಸಿದರು.

ಸಬ್ ಅರ್ಬನ್ ರೈಲ್ವೆ ಯೋಜನೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರ ಸಬ್ ಅರ್ಬನ್ ರೈಲ್ವೆ ಯೋಜನೆ ಅಭಿವೃದ್ಧಿ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಇದು ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ನೀಡುವ ಸಾಮರ್ಥ್ಯ ಹೊಂದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾಮಗಾರಿಗಳ ಡೆಡ್‌ಲೈನ್ ಕುರಿತು ಪ್ರಶ್ನೆಗೆ ಉತ್ತರಿಸಿದ ವಿ. ಸೋಮಣ್ಣ, “ಈಗಲೇ ಕಾಮಗಾರಿಯ ಡೆಡ್‌ಲೈನ್ ಬಗ್ಗೆ ಹೇಳುವುದು ಸೂಕ್ತವಲ್ಲ. ಆದರೂ ಸಾಧ್ಯವಾದಷ್ಟು ಬೇಗ ಯೋಜನೆಗಳನ್ನು ಪೂರ್ಣಗೊಳಿಸುವ ಪ್ರಯತ್ನ ಮಾಡಲಾಗುತ್ತದೆ. ಹೊಸ ವ್ಯವಸ್ಥಾಪಕ ನಿರ್ದೇಶಕರು (ಎಂಡಿ) ನೇಮಕವಾಗಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ದೆಹಲಿಯಲ್ಲಿ ಹೆಚ್ಚಿದ ಭದ್ರತೆ

77ನೇ ಗಣರಾಜ್ಯೋತ್ಸವ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ, ಹಲವೆಡೆ ಸಂಚಾರ ನಿಷೇಧ

ಒಂದೇ ತ್ರಿವರ್ಣ ಧ್ವಜ, ವಿಭಿನ್ನ ಗೌರವ: ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳೇ ಏಕೆ ಧ್ವಜಾರೋಹಣ ನೆರವೇರಿಸುತ್ತಾರೆ ಗೊತ್ತಾ...?

Padma Awards 2026: ಕರ್ನಾಟಕದ 8 ಮಂದಿ ಸೇರಿದಂತೆ ದೇಶಾದ್ಯಂತ 131 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ!

60 ಎಸೆತಗಳಲ್ಲಿ 155 ರನ್; ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆಯ ಗೆಲುವು; T20 ಸರಣಿ ಭಾರತ ಕೈವಶ!

SCROLL FOR NEXT