ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆಗಾಗಿ ಮಾಣೆಕ್ಷಾ ಪರೇಡ್ ಮೈದಾನವು ಸಂಪೂರ್ಣವಾಗಿ ಸಿದ್ಧಗೊಂಡಿದ್ದು, ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಎರಡು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಾಣೆಕ್ ಶಾ ಪರೇಡ್ ಮೈದಾನದ ಸುತ್ತಲೂ 100ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಒದಗಿಸಲಾಗಿದೆ.
ಗಣ್ಯರ ಓಡಾಟ ಹೆಚ್ಚಿರುವ ಕಾರಣದಿಂದಾಗಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆ 8.30ರಿಂದ 10-30ರವರೆಗೆ ಕಬ್ಬನ್ ರಸ್ತೆಯ ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗಿನ ಎರಡೂ ದಿಕ್ಕುಗಳಲ್ಲೂ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್‌ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.