ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಬೆಂಗಳೂರಿನ ದಾಸನಪುರದಲ್ಲಿ ಚಿನ್ನದಂಗಡಿಗೆ ನುಗ್ಗಿದ ಖದೀಮರು ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ದಾಸನಪುರದಲ್ಲಿ ರಾಮದೇವ್ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಚಿನ್ನಾಭರಣ ದೋಚಿದ್ದಾರೆ. ಜ್ಯುವೆಲ್ಲರಿ ಮಾಲೀಕ ಕನ್ನಯ್ಯಲಾಲ್ ಅಂಗಡಿ ಕ್ಲೋಸ್ ಮಾಡಲು ಮುಂದಾದ ವೇಳೆ ಗನ್ ಹಿಡಿದು ಅಂಗಡಿಗೆ ನುಗ್ಗಿದ್ದರು. ಗನ್ ಹಿಡಿದು ಹೆದರಿಸಿ ಟೇಬಲ್ ಮೇಲಿದ್ದ ಚಿನ್ನವನ್ನು ದೋಚಿದ್ದಾರೆ. ಖದೀಮರು ದರೋಡೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.