ರಾಜೀವ್ ಗೌಡ ಮತ್ತು ಪುರಸಭೆ ಆಯುಕ್ತೆ ಅಮೃತಾ ಗೌಡ 
ರಾಜ್ಯ

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ: ರಾಜೀವ್ ಗೌಡಗೆ ಜೈಲೇ ಗತಿ; 14 ದಿನ ನ್ಯಾಯಾಂಗ ಬಂಧನ

ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್​ ಗೌಡ ಅವರನ್ನು ನಿನ್ನೆ ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ಇಂದು ಆರೋಪಿಯನ್ನು ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದರು.

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಮಂಗಳವಾರ ಜೈಲು ಪಾಲಾಗಿದ್ದು, ಜೆಎಂಎಫ್​ಸಿ ಕೋರ್ಟ್​ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್​ ಗೌಡ ಅವರನ್ನು ನಿನ್ನೆ ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ಇಂದು ಆರೋಪಿಯನ್ನು ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದರು.

ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕರು, ಹೆಚ್ಚಿನ ತನಿಖೆಗಾಗಿ ಆರೋಪಿ ರಾಜೀವ್ ಗೌಡ ಅವರನ್ನು ಪೊಲೀಸ್​ ಕಸ್ಟಡಿಗೆ ನೀಡುವಂತೆ ವಾದಿಸಿದರು. ಇತ್ತ ಜಾಮೀನಿಗಾಗಿ ಆರೋಪಿ ಪರ ವಕೀಲರು ಕೂಡ ವಾದ ಮಂಡಿಸಿದ್ದರು.

ರಾಜೀವ್ ಗೌಡ ಪರ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದ್ದು, ಇದು ರಾಜಕೀಯ ಪ್ರೇರಿತ ದೂರು. ಘಟನೆ ನಡೆದ ಎರಡು ದಿನಗಳ ಬಳಿಕ ದೂರು ನೀಡಲಾಗಿದೆ. ಈಗಾಗಲೇ ಆರೋಪಿಯು ಮಾಧ್ಯಮಗಳ ಮೂಲಕ ಕ್ಷಮೆಯನ್ನೂ ಕೇಳಿದ್ದಾರೆ. ಕೇವಲ ಜೈಲಿಗೆ ಹಾಕಬೇಕೆಂಬ ಉದ್ದೇಶದಿಂದ ಸೆಕ್ಷನ್ ಹಾಕಲಾಗಿದೆ. ಹೀಗಾಗಿ ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಪಿಗೆ ರಾಜೀವ್​ ಗೌಡನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ.

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದ ರಾಜೀವ್ ಗೌಡ ವಿರುದ್ಧ ಕೇಸ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್