ತ್ರಿಪುರಾ ಮಹಿಳೆ 
ರಾಜ್ಯ

Video - ಬೆಂಗಳೂರಿನಲ್ಲಿ 'ಸಂಪೂರ್ಣ ಬೆತ್ತಲೆ' ವ್ಯಕ್ತಿಯಿಂದ ಲೈಂಗಿಕ ಕಿರುಕುಳ: ತ್ರಿಪುರಾ ಮಹಿಳೆ ದೂರು; ಕೇಸ್ ದಾಖಲು!

ಜನವರಿ 24 ರಂದು ತ್ರಿಪುರಾದ ಮಹಿಳೆಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಮೇಲಿನ ದೌರ್ಜನ್ಯದ ವಿಡಿಯೋವನ್ನು ಹಂಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ವ್ಯಕ್ತಿಯೊಬ್ಬ "ಸಂಪೂರ್ಣ ಬೆತ್ತಲೆ"ಯಾಗಿ ಕಾರು ಚಲಾಯಿಸಿಕೊಂಡು, ಮಹಿಳೆಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜನವರಿ 24 ರಂದು ತ್ರಿಪುರಾದ ಮಹಿಳೆಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಮೇಲಿನ ದೌರ್ಜನ್ಯದ ವಿಡಿಯೋವನ್ನು ಹಂಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಹಿಳೆ ಕೆಲಸದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಕಾರಿನಲ್ಲಿ "ಸಂಪೂರ್ಣ ಬೆತ್ತಲೆ"ಯಾಗಿದ್ದ ವ್ಯಕ್ತಿಯೊಬ್ಬರು ಮಹಿಳೆಯನ್ನು ಕರೆದಿದ್ದು, ಆಕೆ ಬಾರದಿದ್ದಾಗ ಆಕೆಯ ಕಡೆಗೆ ಕಾರು ಓಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಯಾರೂ ಸಹ ತನಗೆ ಸಹಾಯ ಮಾಡಲಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಹೆಬ್ಬಗೋಡಿ ಪೊಲೀಸ್ ಠಾಣೆಯ ಗಸ್ತು ಸಿಬ್ಬಂದಿಗೆ ಸ್ಥಳೀಯರು ಘಟನೆಯ ಬಗ್ಗೆ ಮಾಹಿತಿ ನೀಡಿದಾಗ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ನಂತರ, ಮಹಿಳೆಯನ್ನು ಗುರುತಿಸಲಾಗಿದ್ದು, ಅವರು ತ್ರಿಪುರಾ ಮೂಲದವರಾಗಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಸಂಪರ್ಕಿಸಿ ವಿವರವಾದ ಹೇಳಿಕೆ ನೀಡುವಂತೆ ಕೇಳಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ 75(ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಶಂಕಿತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

SCROLL FOR NEXT