ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆನಂದ್ ಎಂಬುವರು ಚಿಕ್ಕಮಗಳೂರಿನ ಖಾಸಗಿ ಹೋಂ ಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ.
ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ಆನಂದ್ ಇರುವ ವಿಷಯ ತಿಳಿಯುತ್ತಿದ್ದಂತೆಯೇ ಗುಂಪೊಂದು ಏಕಾಏಕಿ ದಾಳಿ ಮಾಡಿತ್ತು. ಸದ್ಯ ಹಲ್ಲೆ ವಿಡಿಯೋ ವೈರಲ್ ಆಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಶಾಂತಗೊಳಿಸಿದರು. ಸದ್ಯ ಈ ಬಗ್ಗೆ ಯಾರು ದೂರು ದಾಖಲಿಸಿಲ್ಲ.