ದಾಳಿಯಾದ ಕೆಮಿಕಲ್ ತಯಾರಿಕ ಘಟಕ 
ರಾಜ್ಯ

ಮೈಸೂರು: ಡ್ರಗ್ಸ್ ತಯಾರಿಕೆ ಅನುಮಾನ; ಫೆನಾಯಿಲ್ ಘಟಕದ ಮೇಲೆ ದೆಹಲಿ ಪೊಲೀಸರು ದಾಳಿ!

ಇದೀಗ ಮೈಸೂರಿನಲ್ಲಿ ದೆಹಲಿ ಪೊಲೀಸರು ಹಾಗೂ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದು, ಕರ್ನಾಟಕ ಡ್ರಗ್ಸ್ ತಯಾರಿಕೆಗೆ ಸೇಫ್‌ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ.

ಮೈಸೂರು: ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಡ್ರಗ್ಸ್ ತಯಾರಕ ಘಟಕವೊಂದರ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ, ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದರು.

ಇದೀಗ ಮೈಸೂರಿನಲ್ಲಿ ದೆಹಲಿ ಪೊಲೀಸರು ಹಾಗೂ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದು, ಕರ್ನಾಟಕ ಡ್ರಗ್ಸ್ ತಯಾರಿಕೆಗೆ ಸೇಫ್‌ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ.

ಹೌದು. ನಗರದ ಹೆಬ್ಬಾಳದಲ್ಲಿರುವ ಟುಕ್ ಟುಕ್ ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ತಯಾರಿಕಾ ಘಟಕದ ಮೇಲೆ ಈ ದಾಳಿ ನಡೆದಿದೆ. ಈ ಘಟಕ ಬೋರೇಗೌಡ ಎಂಬ ವ್ಯಕ್ತಿಗೆ ಸೇರಿದ್ದು, 1 ವರ್ಷದ ಹಿಂದೆ ಗಣಪತ್ ಪಾಲ್ ಎಂಬ ಗುಜರಾತ್ ಮೂಲದ ವ್ಯಕ್ತಿಗೆ ಫೆನಾಯಿಲ್ ತಯಾರಿಕೆಗಾಗಿ ಕಟ್ಟಡ ಬಾಡಿಗೆ ಕೊಟ್ಟಿದ್ದರಂತೆ.

ಆದರೆ, ಗುಜರಾತ್ ನಲ್ಲಿ ಇತ್ತೀಚೆಗೆ ಡ್ರಗ್‌ಪೆಡ್ಲರ್‌ ವೊಬ್ಬ ಸಿಕ್ಕಿಬಿದ್ದಿದ್ದ. ಅವನಿಗೂ ಗಣಪತ್ ಲಾಲ್ ಗೂ ಸಂಬಂಧ ಇದೆ ಎನ್ನಲಾಗಿದೆ‌. ಹೀಗಾಗಿ ಈ ಫೆನಾಯಿಲ್‌ ತಯಾರಿಕಾ ಘಟಕದ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

ದಾಳಿಯ ವೇಳೆ ಪಿನಾಯಿಲ್ ಉತ್ಪಾದನೆಗೆ ಬಳಸುವ ಕಚ್ಚಾ ವಸ್ತುಗಳು ಪತ್ತೆಯಾಗಿವೆ. ಡಿಟರ್ಜೆಂಟ್, ಸೋಡಾ, ಉಪ್ಪು ಸೇರಿದಂತೆ ವಿವಿಧ ರಾಸಾಯನಿಕ ಕಚ್ಚಾ ವಸ್ತುಗಳು ಲ್ಯಾಬ್‌ನಲ್ಲಿ ಸಂಗ್ರಹವಾಗಿದ್ದವು. ಆದರೆ, ಸದ್ಯದ ಮಟ್ಟಿಗೆ ಯಾವುದೇ ನಿಷೇಧಿತ ಮಾದಕ ದ್ರವ್ಯಗಳು ಪತ್ತೆಯಾಗಿರುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಕಾರ್ಯಾಚರಣೆ ನಡೆದ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಡಿಸಿಪಿ ಸುಂದರ್ ರಾಜ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಬ್ಬಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಲ್ಯಾಬ್ ಇದ್ದು, ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ:': ಪ್ರತಿಪಕ್ಷಗಳಿಗೆ CJPಯ ಅಭಿಜೀತ್ ದೀಪ್ಕೆ ಆಗ್ರಹ

ನಿರಂತರ ಮಳೆಗೆ ಸಿಕ್ಕಿಂ ತತ್ತರ: ರಿಂಬಿ ಗ್ರಾಮದಲ್ಲಿ ಭಾರೀ ಭೂಕುಸಿತ, 30ಕ್ಕೂ ಹೆಚ್ಚು ಮನೆಗಳು ಹಾನಿ, ಸಿಎಂ ತಮಂಗ್ ಹೇಳಿದ್ದೇನು? Video