ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚೈತನ್ಯಾ ಬೀಳಗಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು. 
ರಾಜ್ಯ

ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದ ಸಿಎಂ; ಕೆಲಸ ಎಲ್ಲಿ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚೈತನ್ಯಾ ಬೀಳಗಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಬೆಂಗಳೂರು: ಇತ್ತೀಚಿಗೆ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.

ಚೈತನ್ಯಾ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕಿ(ಪ್ರಥಮ ದರ್ಜೆ ಸಹಾಯಕ) ಉದ್ಯೋಗ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.

ಕಳೆದ ವರ್ಷ ನವೆಂಬರ್ 25ರಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!