ರಾಮಲಿಂಗಾ ರೆಡ್ಡಿ 
ರಾಜ್ಯ

BMTC ಬಸ್'ಗಳಲ್ಲಿ ಗುಟ್ಕಾ ಜಾಹೀರಾತು: ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

ಬಸ್ ಗಳ ಮೇಲೆ ಹಾಕಲಾಗಿರುವ ಜಾಹೀರಾತು ಚಿತ್ರಗಳನ್ನು ಕಿತ್ತೆಸೆಯುತ್ತಿರುವ ಕನ್ನಡಪರ ಹೋರಾಟಗಾರರು, ಇಂತಹ ಅನಾರೋಗ್ಯಕರ ವಸ್ತುಗಳನ್ನು ಪ್ರೋತ್ಸಾಹಿಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ನಗರದ ಬಿಎಂಟಿಸಿ ಬಸ್ ಗಳ ಮೇಲೆ ಗುಟ್ಕಾ ಜಾಹೀರಾತುಗಳು ರಾರಾಜಿಸುತ್ತಿದ್ದು, ಇದರ ವಿರುದ್ಧ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಸಮರ ಸಾರಿದ್ದಾರೆ.

ಬಸ್ ಗಳ ಮೇಲೆ ಹಾಕಲಾಗಿರುವ ಜಾಹೀರಾತು ಚಿತ್ರಗಳನ್ನು ಕಿತ್ತೆಸೆಯುತ್ತಿರುವ ಕನ್ನಡಪರ ಹೋರಾಟಗಾರರು, ಇಂತಹ ಅನಾರೋಗ್ಯಕರ ವಸ್ತುಗಳನ್ನು ಪ್ರೋತ್ಸಾಹಿಸುವುದು ಎಷ್ಟು ಸರಿ? ಇವುಗಳನ್ನು ತಿಂದು ಜನರು ಬಸ್ ನಿಲ್ದಾಣಗಳು, ಮೆಟ್ರೋ ಸ್ಟೇಷನ್‌ಗಳು ಮತ್ತು ಪ್ರಮುಖ ವೃತ್ತಗಳಲ್ಲಿ ಉಗಿದು ನಗರದ ಅಂದವನ್ನು ಹಾಳು ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.

ಈ ಬೆಳವಣಿಗೆ ಕುರಿತು ಸಚಿವ ರಾಮಲಿಂಗಾ ರೆಡ್ಡಿಯವರು ಸ್ಪಷ್ಟನೆ ನೀಡಿದ್ದು, ಪ್ರಸ್ತುತ ಜಾರಿಯಲ್ಲಿರುವ ನಿಯಮಗಳು ಬಸ್‌ನ ಹೊರಭಾಗದ ಶೇಕಡಾ 40 ರಷ್ಟು ಮಾತ್ರ ಜಾಹೀರಾತುಗಳನ್ನು ಅನುಮತಿಸುತ್ತವೆ, ಆದರೆ, ಕೆಲವು ಬಸ್‌ಗಳಲ್ಲಿ ಸಂಪೂರ್ಣವಾಗಿ ಜಾಹೀರಾತು ಹಾಕಲಾಗಿದ್ದು, ಇದರಿಂದ ನಿಯಮ ಉಲ್ಲಂಘನೆಯಾಗಿವೆ ಎಂದು ಹೇಳಿದ್ದಾರೆ.

2 ತಿಂಗಳ ಹಿಂದೆಯೇ ಈ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ. ಬಸ್‌ನ ಹೊರಭಾಗದ ಶೇಕಡಾ 40 ರಷ್ಟು ಜಾಗವನ್ನು ಮಾತ್ರ ಜಾಹೀರಾತುಗಳಿಗೆ ಬಳಸಬೇಕೆಂದು ನಿರ್ದೇಶಿಸಿದ್ದೇನೆ. ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಹೆಚ್ಚಿನ ಜಾಗ ಬಳಕೆಗೆ ಪೂರ್ವಾನುಮತಿ ಅಗತ್ಯವಿದೆ ಎಂದು ತಿಳಿಸಿದ್ದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಸಾರ್ವಜನಿಕ ಕಳವಳವನ್ನು ಒಪ್ಪಿಕೊಂಡ ಅವರು, ಬಿಎಂಟಿಸಿ ಒಂದಕ್ಕೇ ಜಾಹೀರಾತುಗಳಿಂದ ವಾರ್ಷಿಕ ಸುಮಾರು 60 ಕೋಟಿ ರೂಪಾಯಿ ಆದಾಯ ಬರುತ್ತಿದೆ. ಕೆಎಸ್‌ಆರ್‌ಟಿಸಿ ಮತ್ತು ವಾಯುವ್ಯ ಸಾರಿಗೆ ಸಂಸ್ಥೆಗಳಿಗೂ ಇದು ದೊಡ್ಡ ಮಟ್ಟದ ಆದಾಯದ ಮೂಲವಾಗಿದೆ ಎಂದರು.

ಬಳಿಕ ಗುಟ್ಕಾ ನಿಷೇಧದ ಬಗ್ಗೆ ಮಾತನಾಡಿದ ಸಚಿವರು, 'ಒಂದು ವೇಳೆ ಗುಟ್ಕಾ ಉತ್ಪನ್ನಗಳು ಕೆಟ್ಟದ್ದಾಗಿದ್ದರೆ ಕೇಂದ್ರ ಸರ್ಕಾರ ದೇಶವ್ಯಾಪ್ತಿ ಅವುಗಳನ್ನು ನಿಷೇಧ ಮಾಡಲಿ. ನಾವು ಗುಟ್ಕಾ ನಿಷೇಧಕ್ಕಾಗಿ ಹೋರಾಟ ಮಾಡಬೇಕೋ ಅಥವಾ ಬಸ್ ಮೇಲಿನ ಸ್ಟಿಕ್ಕರ್ ಬಗ್ಗೆಯೋ? ಮೊದಲು ನಿಷೇಧ ಜಾರಿಯಾಗಲಿ, ಆಗ ಜಾಹೀರಾತುಗಳು ತಾನಾಗಿಯೇ ನಿಲ್ಲುತ್ತವೆ ಎಂದು ಹೇಳಿದರು.

ಪೀಕ್ ಅವರ್‌ನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಜನದಟ್ಟಣೆ ಹೆಚ್ಚಿರುವ ಬಗ್ಗೆ ಮಾತನಾಡಿ, ಪೀಕ್ ಅವರ್‌ನಲ್ಲಿ ಹೆಚ್ಚಿನ ಬಸ್‌ಗಳನ್ನು ಓಡಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಗನ ಜ್ವರಕ್ಕೆ ಈ ವರ್ಷ ಮೊದಲ ಸಾವು: ಶಿವಮೊಗ್ಗದಲ್ಲಿ 29 ವರ್ಷದ ಯುವಕ ಬಲಿ, ಆರೋಗ್ಯ ಇಲಾಖೆಗೆ ಮುನ್ನೆಚ್ಚರಿಕೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 'ಸ್ಕ್ಯಾಮ್ ಲಾರ್ಡ್' ಪೋಸ್ಟ್: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ 'ಗಾಮೋಸಾ' ಧರಿಸದೆ ಈಶಾನ್ಯಕ್ಕೆ ಅಗೌರವ: ಅಮಿತ್ ಶಾ

AIADMK ಭ್ರಷ್ಟಾಚಾರವನ್ನು ನಿಮ್ಮ ವಾಶಿಂಗ್ ಮೆಷಿನ್ ನಲ್ಲಿ ಸ್ವಚ್ಛಗೊಳಿಸಿದ್ದೀರಾ? ಬಿಜೆಪಿಗೆ ಎಂ.ಕೆ ಸ್ಟಾಲಿನ್ ಟಾಂಗ್

ಕೃತಕ ಬುದ್ಧಿಮತ್ತೆ, ಸಾಮಾಜಿಕ ಮಾಧ್ಯಮ ಜವಾಬ್ದಾರಿಯುತ ಬಳಕೆಗೆ ಜಾರಿಗೆ ತರಬೇಕಾದ ಕ್ರಮಗಳ ಕುರಿತು ಸಮಾಲೋಚನೆ: ಸಚಿವ ಪ್ರಿಯಾಂಕ್ ಖರ್ಗೆ

SCROLL FOR NEXT