ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‍ಗೆ ಕಾರು ಡಿಕ್ಕಿ, ತಪ್ಪಿದ ದುರಂತ..!

ಬಸ್‍ನ ಮಧ್ಯೆ ಭಾಗಕ್ಕೆ ಕಾರು ಡಿಕ್ಕಿಯಾಗಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅಲ್ಲದೆ, ಬಸ್‍'ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಸ್'ಗೆ ಡಿಕ್ಕಿ ಹೊಡೆದಿರುವ ಕಾರು
Manjula VN
Updated On : 29 Jan 2026, 12:09 pm

ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿ ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‌ವೊಂದಕ್ಕೆ ಕಾರೊಂದು ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಕಾರಿನ ಚಾಲಕ ಸಿಗ್ನಲ್ ತಪ್ಪಿಸಲು ವೇಗವಾಗಿ ನುಗ್ಗಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಬಸ್‍ನ ಮಧ್ಯೆ ಭಾಗಕ್ಕೆ ಕಾರು ಡಿಕ್ಕಿಯಾಗಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅಲ್ಲದೆ, ಬಸ್‍'ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement

Also Read

ಕಂಠಪೂರ್ತಿ ಕುಡಿದು ಕಾರು ಚಲಾಯಿಸಿ ವಾಹನಗಳಿಗೆ ಸರಣಿ ಅಪಘಾತ: ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement