ಸಿಎಂ ಸಿದ್ದರಾಮಯ್ಯ 
ರಾಜಕೀಯ

ಮನ್ರೇಗಾ ಯೋಜನೆ ಕುರಿತು ಚರ್ಚೆ: ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ?

ಶಾಸಕರು ಈ ಕಾಯ್ದೆ ಕುರಿತಾದ ಚರ್ಚೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ನರೇಗಾ ವಿಷಯಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಆದರೆ, ಚರ್ಚೆಗೆ ಅವಕಾಶ ಸಿಕ್ಕಿಲ್ಲ.

ಬೆಂಗಳೂರು: ಮನ್ರೇಗಾ ಯೋಜನೆ ಬಗ್ಗೆ ಚರ್ಚೆ ಮಾಡಲು ಹಾಗೂ ನಿರ್ಣಯ ಅಂಗೀಕರಿಸುವ ಸಲುವಾಗಿ ವಿಧಾನಮಂಡಲ ಅಧಿವೇಶನವನ್ನ 2 ದಿನ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆಯಲ್ಲಿ ತಿಳಿಸಿದ್ದಾರೆ.

ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸರಕಾರ ಮನರೇಗಾ ಕಾಯ್ದೆ ಬದಲಾಗಿ ಜಾರಿಗೆ ತಂದಿರುವ ವಿಬಿ: ಜಿ‌ ರಾಮ್ ಜಿ ಕಾಯ್ದೆಯ ಕುರಿತು ವಿವರಣೆ ನೀಡಿದ ಸಿದ್ದರಾಮಯ್ಯ, ಈ ಕಾಯ್ದೆ ಕುರಿತು ಸಮಗ್ರ ಚರ್ಚೆ ನಡೆಸಲು ಅಧಿವೇಶನವನ್ನು ಎರಡು ದಿನ ವಿಸ್ತರಣೆ ಮಾಡಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಶಾಸಕರು ಈ ಕಾಯ್ದೆ ಕುರಿತಾದ ಚರ್ಚೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ನರೇಗಾ ವಿಷಯಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಆದರೆ, ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಸೋಮವಾರ ಮಂಗಳವಾರ ನರೇಗಾ ಚರ್ಚೆಗಾಗಿಯೇ ಅಧಿವೇಶನ ವಿಸ್ತರಿಸೋಣ. ಸದನ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಅಲ್ಲದೆ, ವಿಧಾನಪರಿಷತ್ ಸದಸ್ಯರು, ವಿಧಾನಸಭೆ ಸದಸ್ಯರು ಉಭಯ ಸದನಗಳಲ್ಲಿ ಕಡ್ಡಾಯವಾಗಿ ನರೇಗಾ ಚರ್ಚೆಯಲ್ಲಿ ಭಾಗವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ ಅಭಿವೃದ್ಧಿ ಕಾರ್ಯಗಳಿಗಾಗಿ ಶಾಸಕರಿಗೆ ಸಮಾನವಾಗಿ ಅನುದಾನವನ್ನು ನೀಡುವಂತೆ ಎಂಎಲ್‌ಸಿಗಳು ಸಿಎಂಗೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ, ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಮತ್ತು ವಿರೋಧ ಪಕ್ಷದ ಶಾಸಕರಿಗೆ 25 ಕೋಟಿ ರೂ.ಗಳನ್ನು ಸಿಎಂ ಮಂಜೂರು ಮಾಡಿದ್ದಾರೆ. ಎಂಎಲ್‌ಸಿಗಳು ಕನಿಷ್ಠ 25 ಕೋಟಿ ರೂ.ಗಳಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆಲವು ಶಾಸಕರು ಸ್ಥಳೀಯ ಸಂಸ್ಥೆ ಚುನಾವಣೆಗೆ ಮೀಸಲಾತಿ ವಿಷಯವನ್ನು ಎತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ತಿದ್ದುಪಡಿಗಳನ್ನು ಕೋರಿದ್ದಾರೆ.ಆದರೆ ಮೀಸಲಾತಿ ನಿಗದಿಪಡಿಸಲಾಗಿರುವುದರಿಂದ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದರು ಎಂದು ತಿಳಿದುಬಂದಿದೆ. ಇದೇ ವೇಳೆ ಮಾರ್ಚ್‌ನಲ್ಲಿ ಬಜೆಟ್ ಮಂಡಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಸ್ಪಷ್ಟ, ದುರುಪಯೋಗ ಸಾಧ್ಯತೆ': ಜಾತಿ ತಾರತಮ್ಯದ ವಿರುದ್ಧದ ಹೊಸ UGC ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ!

ವಿಬಿ-ಜಿ ರಾಮ್ ಜಿ ಟೀಕಿಸುವ ಜಾಹೀರಾತು ಖಂಡಿಸಿ ಬಿಜೆಪಿ ಸಭಾತ್ಯಾಗ; ಸರ್ಕಾರ ಸಮರ್ಥನೆ

KJ George: ಸಿಎಂ ಪುತ್ರನ ಹಸ್ತಕ್ಷೇಪ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು? ಸದನದಲ್ಲಿ ಸಚಿವ ಸ್ಪಷ್ಟನೆ; Video

ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ: ಅಮಿತ್ ಶಾ, ಫಡ್ನವೀಸ್‌ ಭಾಗಿ; ಸಕಲ ಸರ್ಕಾರಿ ಗೌರವದೊಂದಿಗೆ ಭಾವಪೂರ್ಣ ವಿದಾಯ

CCL ವಿವಾದ: ಅವಾಚ್ಯ ಪದ ಬಳಕೆ ಕುರಿತು ಕಿಚ್ಚಾ ಸುದೀಪ್ ಸ್ಪಷ್ಟನೆ, ಜೋಗಿ ಪ್ರೇಮ್ ಕಾರಣ? ಅಚ್ಚರಿಗೊಂಡ ನಿರ್ದೇಶಕ!

SCROLL FOR NEXT