ಕೆ ಜೆ ಜಾರ್ಜ್ -ಸುನಿಲ್ ಕುಮಾರ್  
ರಾಜ್ಯ

KJ George: ಸಿಎಂ ಪುತ್ರನ ಹಸ್ತಕ್ಷೇಪ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು? ಸದನದಲ್ಲಿ ಸಚಿವ ಸ್ಪಷ್ಟನೆ; Video

ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ವಿಶ್ವಾಸಕ್ಕೆ ಪಡೆಯದೆ ಕ್ರಮ ಕೈಗೊಳ್ಳಲಾಗಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡು ಕೆ ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ಸುದ್ದಿಯಾಗಿತ್ತು.

ಬೆಂಗಳೂರು: ಇಂಧನ ಸಚಿವ ಕೆ.ಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೇ, ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿ ನಂತರ ಇಂದು ವಿಧಾನಸಭೆಯಲ್ಲಿ ಕೂಡ ಪ್ರತಿಧ್ವನಿಸಿದ ಪ್ರಸಂಗ ನಡೆಯಿತು.

ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ವಿಶ್ವಾಸಕ್ಕೆ ಪಡೆಯದೆ ಕ್ರಮ ಕೈಗೊಳ್ಳಲಾಗಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡು ಕೆ ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು, ಸಿಎಂಗೆ ರಾಜೀನಾಮೆ ಪತ್ರ ನೀಡಲು ಮುಂದಾಗಿದ್ದರು, ಆಗ ಸಿಎಂ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಅವರು ಮಧ್ಯೆ ಪ್ರವೇಶಿಸಿ ಜಾರ್ಜ್ ಅವರ ಮನವೊಲಿಸಿದರು ಎಂಬ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಸ್ವತಃ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಇಂಧನ ಇಲಾಖೆಯ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸಿಎಂ ಕಚೇರಿ ಮುಂದಾಗಿತ್ತು. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಇಂಧನ ಇಲಾಖೆ ಆಡಳಿತದಲ್ಲಿ ತೀವ್ರ ಹಸ್ತಕ್ಷೇಪ ಮಾಡುತ್ತಿದ್ದರು. ಇದರಿಂದ ಅಸಮಾಧಾನಗೊಂಡ ಕೆಜೆ ಜಾರ್ಜ್ ಸಿಎಂ ನಿವಾಸಕ್ಕೆ ತೆರಳಿ ಪ್ರಶ್ನಿಸಿದ್ದರು. ಅಲ್ಲದೆ ಸಚಿವ ಸಂಪುಟ ಸಭೆಗೂ ಗೈರಾಗಿದ್ದರು ಎಂದು ಹೇಳಲಾಗಿತ್ತು.

ಮಂತ್ರಿಯಾಗಿ ನನ್ನ ಮಾತಿಗೆ ಬೆಲೆ ಇಲ್ಲ. ಹೀಗಿರುವಾಗ ನಾನೇಕೆ ಇಲ್ಲಿ ಇರಲಿ ಎಂದು ಸಚಿವರು ಬೇಸರ ಹೊರ ಹಾಕಿದ್ದರು ಎಂಬ ಮಾಹಿತಿ ಇದೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಅವರು ಸಂಧಾನ ನಡೆಸಿ ಸಚಿವರನ್ನು ಸಮಾಧಾನ ಪಡಿಸಿದ್ದರು ಎಂಬ ಮಾಹಿತಿ ಕೇಳಿ ಬರುತ್ತಿತ್ತು.

ಇಂದು ಸದನದಲ್ಲಿ ಪ್ರಸ್ತಾಪ

ಇಂದು ಪ್ರಶ್ನೋತ್ತರ ಅವಧಿಯ ಬಳಿಕ ಈ ವಿಚಾರವಾಗಿ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಪ್ರಸ್ತಾಪ ಮಾಡಿದರು. " ಇಂಧನ ಸಚಿವ ಕೆ ಜೆ ಜಾರ್ಜ್ ರಾಜೀನಾಮೆ ಕೊಟ್ಟಿದ್ದಾರೆ. ಸಿಎಂ ಮಗನ ಹಸ್ತಕ್ಷೇಪದ ಕಾರಣಕ್ಕಾಗಿ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ, ಈ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಆಗ್ರಹಿಸಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಕೆಜೆ ಜಾರ್ಜ್, ರಾಜೀನಾಮೆ ಕೊಡಲು ಮುಂದಾಗಿದ್ದೇನೆ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ ಎಂದು ಹೇಳಿದ್ದಾರೆ‌. ನಾನು ಮಾಧ್ಯಮಗಳಿಗೆ ಹೇಳಿದ್ದೇನಾ? ನನಗೆ ಸಿಎಂ ಸಿದ್ದರಾಮಯ್ಯ ಮೇಲೆ ಸಂಪೂರ್ಣ ನಂಬಿಕೆ ಇದೆ. ಈ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದರು.

ಹಿಂದೆಲ್ಲಾ ದಿನಕ್ಕೆ ಮೂರು ಬಾರಿ ನ್ಯೂಸ್ ಬರುತ್ತಿತ್ತು. ಈಗ ಗಂಟೆಗೊಂದು ಬ್ರೇಕಿಂಗ್ ನ್ಯೂಸ್ ಬರುತ್ತಿದೆ. ಅವರೇ ಸೃಷ್ಟಿ ಮಾಡುತ್ತಿದ್ದಾರೆ. ನಾನು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ನನಗೆ ಸಿಎಂ ಹಾಗೂ ಸರ್ಕಾರದ ಮೇಲೆ ಸಂಪೂರ್ಣ ನಂಬಿಕೆ ಮತ್ತು ಬೆಂಬಲ ಇದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ: ಅಮಿತ್ ಶಾ, ಫಡ್ನವೀಸ್‌ ಭಾಗಿ; ಸಕಲ ಸರ್ಕಾರಿ ಗೌರವದೊಂದಿಗೆ ಭಾವಪೂರ್ಣ ವಿದಾಯ

ಅಜಿತ್ ಪವಾರ್ ದುರಂತ ಅಂತ್ಯ: ಪವಾರ್ ಸಾಮ್ರಾಜ್ಯದ ಚುಕ್ಕಾಣಿ ಹಿಡಿಯುತ್ತಾರಾ ಸುನೇತ್ರಾ? ದಾದಾ ಪತ್ನಿಗೆ NCP ಸಾರಥ್ಯ!

AI ಬಳಸಿ ನನ್ನ ತೇಜೋವಧೆ: ವೈರಲ್ ಆಡಿಯೋ ಬಗ್ಗೆ ಮಾಜಿ ಸಂಸದ LR ಶಿವರಾಮೇಗೌಡ ಸ್ಪಷ್ಟೀಕರಣ

Ajit Pawar Plane Crash: ವಿಮಾನ ದುರಂತ ಸ್ಥಳದಲ್ಲಿ Black Box ಪತ್ತೆ..!

'ಅಂಬರೀಷ್ ನ ಕಾಂಗ್ರೆಸ್‌ಗೆ ಕರ್ಕೊಂಡು ಬಂದೆ, ಅವನು ತೊಳೆದುಬಿಟ್ಟು ಹೋದ: ಲೋಕಸಭೆ ಚುನಾವಣೆಯಲ್ಲಿ 36 ಕೋಟಿ ಖರ್ಚು ಮಾಡಿಸಿ HDK ಮೋಸ ಮಾಡಿದ'

SCROLL FOR NEXT