ಆಟೋಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕ 
ರಾಜ್ಯ

ಕೊಡಗು Hit and run case: ಪರಾರಿಯಾಗಿದ್ದ ಕಾರು ಚಾಲಕ ಪೊಲೀಸರ ವಶಕ್ಕೆ

ಆಟೋ ಸಂಪಾಜೆ ಗೇಟಿನಿಂದ ಚಡಾವು ಕಡೆ ತೆರಳುತ್ತಿತ್ತು, ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು.

ಕೊಡಗು: ಹಿಂಬದಿಯಿಂದ ಆಟೋಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕನ ಸಾವಿಗೆ ಕಾರಣನಾಗಿದ್ದ ಕಾರು ಚಾಲಕನನ್ನು ಮಡಿಕೇರಿ ಪೊಲೀಸರು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಟೋ ಸಂಪಾಜೆ ಗೇಟಿನಿಂದ ಚಡಾವು ಕಡೆ ತೆರಳುತ್ತಿತ್ತು, ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು.

ಈ ನಡುವೆ ಡಿಕ್ಕಿಯಿಂದಾಗಿ ಆಟೋದಿಂದ ಕೆಳಗೆ ಬಿದ್ದ ಚಾಲಕನ ಮೇಲೆ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಹರಿದು, ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ಘಟನೆಯಲ್ಲಿ ಮತ್ತೋರ್ವ ಪ್ರಯಾಣಿಕನಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಅಪಘಾತಕ್ಕೆ ಕಾರಣನಾದ ಕಾರು ಚಾಲಕನ ಬಂಧನಕ್ಕೆ ಆಗ್ರಹಗಳು ವ್ಯಕ್ತವಾಗಿದ್ದವು.

ಇದರ ಬೆನ್ನಲ್ಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಮಡಿಕೇರಿ ಪೊಲೀಸರು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!