ಸುದ್ದಿ ಮುಖ್ಯಾಂಶಗಳು  online desk
ರಾಜ್ಯ

News headlines 31-01-2026 | ಬೀದರ: ನಿಗೂಢ ಸ್ಫೋಟ; 6 ಮಂದಿಗೆ ಗಾಯ; ಗೃಹ ಸಚಿವರೇ ಅಸಹಾಯಕ: ಅಕ್ರಮ ಮರಳು ಗಣಿಗಾರಿಕೆಗೆ ಹೈಕೋರ್ಟ್ ಕಳವಳ; ಮೈಸೂರು: ಮತ್ತೊಂದು ಡ್ರಗ್ಸ್ ಫ್ಯಾಕ್ಟರಿ ಪತ್ತೆ

ಬೀದರ್ ನಲ್ಲಿ ನಿಗೂಢ ಸ್ಫೋಟ; 4 ಮಕ್ಕಳು ಸೇರಿ 6 ಮಂದಿಗೆ ಗಾಯ

ಬೀದರ್ ನಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ 4 ಮಕ್ಕಳು ಸೇರಿ ಕನಿಷ್ಟ 6 ಮಂದಿ ಮಕ್ಕಳು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಬೀದರ್ ನ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ. ಶಾಲೆಗೆ ತೆರಳುತ್ತಿದ್ದ 4 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ವಯಸ್ಕರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಆರು ತಿಂಗಳಲ್ಲಿ ಇದು ಎರಡನೇ ಸ್ಫೋಟವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ: ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದು, ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಶನಿವಾರ ವಿಶೇಷ ತನಿಖಾ ತಂಡ ರಚಿಸಿದೆ. ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಎಸ್‌ಐಟಿ ಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕೂಡ ಇರುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ನನ್ನ ತಮ್ಮ ಸಿ.ಜೆ.ರಾಯ್ ಆತ್ಮಹತ್ಯೆಗೆ ಐ.ಟಿ.ಅಧಿಕಾರಿಗಳ ಕಿರುಕುಳ ಹಾಗೂ ಒತ್ತಡವೇ ಕಾರಣ ಎಂದು ಸಹೋದರ ಸಿ.ಜೆ.ಬಾಬು ಅವರು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕೇರಳದ ಐ.ಟಿ.ಅಧಿಕಾರಿಗಳು ಜ.28ರಿಂದಲೂ ನನ್ನ ತಮ್ಮ ಸಿ.ಜೆ.ರಾಯ್ ಅವರನ್ನು ವಿಚಾರಣೆ ಮಾಡುತ್ತಿದ್ದರು. ಅದರಂತೆ ಶುಕ್ರವಾರವೂ ಕಚೇರಿಗೆ ಬಂದು ವಿಚಾರಣೆ ಮಾಡಿದ್ದಾರೆ. ಐಟಿ ಇಲಾಖೆಯ ಅಡಿಷನಲ್ ಕಮಿಷನರ್ ಕೃಷ್ಣ ಪ್ರಸಾದ್ ಸಹ ಅಧಿಕಾರಿಗಳ ತಂಡದಲ್ಲಿದ್ದರು ಎಂದು ಹೇಳಿದರು.

ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್ ಫ್ಯಾಕ್ಟರಿ ಪತ್ತೆ

ಗುಜರಾತ್ ಮತ್ತು ಕರ್ನಾಟಕದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಬೃಹತ್ ಮಾದಕ ದ್ರವ್ಯ ಜಾಲವನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಭೇದಿಸಿದ್ದು, ಸುಮಾರು 10 ಕೋಟಿಗೂ ಅಧಿಕ ಮೌಲ್ಯದ 35 ಕೆಜಿ ಮೆಫೆಡ್ರೋನ್ (MD), 1.8 ಕೆಜಿ ಅಫೀಮು ಮತ್ತು 25.6 ಲಕ್ಷ ನಗದು ವಶಕ್ಕೆ ಪಡೆದುಕೊಂಡಿದೆ. ರಾಜಸ್ಥಾನದ ಜಾಲೋರ್ ಜಿಲ್ಲೆಯ ಮಹೇಂದ್ರ ಕುಮಾರ್ ವಿಷ್ಣೋಯ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಎನ್ಸಿಬಿ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಆರೋಪಿಗಳ ಬಂಧನದ ಬಳಿಕ ಎನ್‌ಸಿಬಿಯ ಬೆಂಗಳೂರು ವಲಯ ಘಟಕವು ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಫಿನಾಯಿಲ್ ಫ್ಯಾಕ್ಟರಿ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರಗ್ಸ್ ಘಟಕ ಮೇಲೆ ದಾಳಿ ನಡೆಸಿ, ಅತ್ಯಾಧುನಿಕ ಉಪಕರಣಗಳು ಮತ್ತು ಡ್ರಗ್ಸ್ ತಯಾರಿಕೆಗೆ ಬಳಸುವ ವಸ್ತುಗಳನ್ನು ವಶಕ್ಕೆ ಪಡೆದಿದೆ ಎಂದು ಎನ್ಸಿಬಿ ಹೇಳಿದೆ. ಮೈಸೂರಿನಲ್ಲಿ ರಹಸ್ಯ ಹೈಟೆಕ್ ಡ್ರಗ್ಸ್ ಘಟಕ ಕಾರ್ಯ ನಿರ್ವಹಿಸುತ್ತಿದ್ದುದನ್ನು ಎನ್'ಸಿಬಿ ಬಯಲುಗೊಳಿಸಿದ್ದು, ಇದರೊಂದಿಗೆ ರಾಜ್ಯದ ಗೃಹ ಸಚಿವರ ಹಾಗೂ ಗೃಹ ಇಲಾಖೆಯ ವೈಫಲ್ಯ ಬಯಲಾಗಿದೆ ಎಂದು ಬಿಜೆಪಿ ಕಿಡಿಕಾರಿದೆ

ರಾಜ್ಯ ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಗಣಿಗಾರಿಕೆಗೆ ಹೈಕೋರ್ಟ್ ತೀವ್ರ ಕಳವಳ

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರೆ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದೆ. ಅಕ್ರಮ ಮರಳು ಸಾಗಣೆಯಿಂದ ಕೃಷಿ ಜಮೀನುಗಳು ಹಾಳಾಗುತ್ತಿವೆ, ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ ಹಾಗೂ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

World Economic Forum: 46 ಕಂಪನಿಗಳ ಜೊತೆ ಮಾತುಕತೆ, ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ; ಸಚಿವ ಎಂ.ಬಿ ಪಾಟೀಲ್

ಸ್ವಿಟ್ಜರ್‌ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ 46 ಜಾಗತಿಕ ಮತ್ತು ಭಾರತೀಯ ಕಂಪನಿಗಳು, ಹೂಡಿಕೆದಾರರು ಮತ್ತು ದೇಶದ ನಾಯಕರೊಂದಿಗೆ ಮಾತುಕತೆ ನಡೆಸಿರುವುದಾಗಿ ಸಚಿವ ಎಂಬಿ ಪಾಟೀಲ್ ಶನಿವಾರ ಹೇಳಿದ್ದಾರೆ. ಹೂಡಿಕೆ ಉದ್ದೇಶಗಳ ಕುರಿತು ಚರ್ಚೆಗಳು ನಡೆದಿವೆ. ಆದರೆ, ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ ಎಂದು ಅವರು ಹೇಳಿದರು. ಕರ್ನಾಟಕದಿಂದ ತೆರಳಿದ್ದ ನಿಯೋಗಗಳು ಏರೋಸ್ಪೇಸ್ ಮತ್ತು ರಕ್ಷಣೆ, ಸುಧಾರಿತ ಉತ್ಪಾದನೆ, ಪಾನೀಯಗಳು ಮತ್ತು ಆಹಾರ ಸಂಸ್ಕರಣೆ, ಬಾಹ್ಯಾಕಾಶ ತಂತ್ರಜ್ಞಾನ, ದತ್ತಾಂಶ ಕೇಂದ್ರ ಮತ್ತು ಡಿಜಿಟಲ್ ಮೂಲಸೌಕರ್ಯ ಸೇರಿದಂತೆ ಹಲವಾರು ವಲಯಗಳಿಗೆ ಸಂಬಂಧಿಸಿದ ಸಭೆಗಳು ಮತ್ತು ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Union Budget 2026: 'ಕರ್ತವ್ಯ ಮಂತ್ರ' ಪಠಿಸಿದ ನಿರ್ಮಲಾ; ಹೂಡಿಕೆ, ಉದ್ಯೋಗ, ಉತ್ಪಾದನೆಗೆ ಒತ್ತು

Union Budget 2026 Live updates | ನಿರ್ಮಲಾ ಸೀತಾರಾಮನ್ ಬಜೆಟ್ ಬಂಡವಾಳ ಹೂಡಿಕೆ, ಉದ್ಯೋಗ ಮತ್ತು ಉತ್ಪಾದನೆಯಿಂದ ಬೆಳವಣಿಗೆಗೆ ಶಕ್ತಿ ತುಂಬಲು ಒತ್ತು

Union Budget 2026: ಸರ್ಕಾರದ ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ ನಿರ್ಮಲಾ

ಕೇಂದ್ರ ಬಜೆಟ್ 2026-27: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

Union Budget 2026: ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮೇಲಿನ ವೆಚ್ಚ 40,000 ಕೋಟಿ ರೂ.ಗೆ ಹೆಚ್ಚಳ

SCROLL FOR NEXT