ಹೈಕೋರ್ಟ್ 
ರಾಜ್ಯ

ರಾಜ್ಯ ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಗಣಿಗಾರಿಕೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರೆ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.

ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರೆ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದೆ.

ಅಕ್ರಮ ಮರಳು ದಂಧೆಯಲ್ಲಿ ರಾಜಕೀಯ ಪಕ್ಷಗಳ ಪ್ರಭಾವಿಗಳು ಭಾಗಿಯಾಗಿರುವ ಶಂಕೆಯೂ ಇದೆ ಎಂಬ ಮಾತುಗಳೂ ಕೇಳಿಬಂದಿವೆ. ಅಕ್ರಮ ಮರಳು ಸಾಗಣೆಯಿಂದ ಕೃಷಿ ಜಮೀನುಗಳು ಹಾಳಾಗುತ್ತಿವೆ, ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ ಹಾಗೂ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

ಇದೇ ವೇಳೆ ಅಕ್ರಮ ತಡೆಯಲು ರಚಿಸಲಾದ ಸ್ಪೆಷಲ್ ಟಾಸ್ಕ್ ಫೋರ್ಸ್ (STF) ಕೇವಲ ಹೆಸರಿಗಷ್ಟೇ ಇದ್ದು, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಟೀಕಿಸಿದೆ.

ಈ ವಿಷಯ ಅತ್ಯಂತ ಗಂಭೀರವಾದದ್ದು. ಆದ್ದರಿಂದ ಕೇಂದ್ರ ಸಂಸ್ಥೆ ಅಥವಾ ವಿಶೇಷವಾಗಿ ರಚಿಸಲಾದ ತನಿಖಾ ಸಂಸ್ಥೆ ಅಥವಾ ವಿಶೇಷ ತನಿಖಾ ತಂಡ (ಎಸ್‌ಐಟಿ) ಮೂಲಕ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವ ಅಗತ್ಯವಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ತಾರಾ ವಿತಸ್ತ ಗಂಜು ಅವರನ್ನೊಳಗೊಂಡ ವಿಭಾಗೀಯ ಪೀಠ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಜನವರಿ 28ರಂದು ವಿಧಾನಸಭೆಯಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಆಧರಿಸಿ ಸ್ವಯಂ ಪ್ರೇರಿತವಾಗಿ (ಸುವೋ ಮೋಟೋ) ಪ್ರಕರಣವನ್ನು ದಾಖಲಿಸಿಕೊಂಡು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.

ಈ ಸಂಬಂಧ ಗೃಹ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ಮೂರು ವಾರಗಳೊಳಗೆ ಉತ್ತರ ನೀಡುವಂತೆ ನಿರ್ದೇಶಿಸಿದೆ.

ಜನವರಿ 18ರ ದಿನಾಂಕದ ಸುದ್ದಿವಾಹಿನಿಗಳ ವರದಿಗಳ ಪ್ರಕಾರ, ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಿಗೆ ಸೇರಿದ ದೊಡ್ಡ ಮತ್ತು ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಗೃಹ ಸಚಿವರು ವಿಧಾನಸಭೆಯಲ್ಲಿ ಹೇಳಿದ್ದರು. ಅಲ್ಲದ, ಅಕ್ರಮವನ್ನು ತಡೆಯಲು ಅಸಹಾಯಕರಾಗಿರುವುದಾಗಿಯೂ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!