ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ  
ರಾಜ್ಯ

VTU ಹೊಸ ದಾಖಲೆ: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ ಫಲಿತಾಂಶ ಪ್ರಕಟ !

ಕಳೆದ ತಿಂಗಳು ಅಂತಿಮ ಸೆಮಿಸ್ಟರ್‌ ಎಂಜಿನಿಯರಿಂಗ್ ಪರೀಕ್ಷೆಗೆ ಹಾಜರಾಗಿದ್ದ 56,192 ವಿದ್ಯಾರ್ಥಿಗಳ ಫಲಿತಾಂಶವನ್ನು ಕೇವಲ 10 ನಿಮಿಷಗಳಲ್ಲಿ ಪ್ರಕಟಿಸುವ ಮೂಲಕ ನಿರ್ಮಿಸಿದ್ದ ತನ್ನದೇ ದಾಖಲೆಯನ್ನು ವಿಟಿಯು ಇದೀಗ ಮುರಿದಿದೆ.

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ನಿನ್ನೆ ಮಂಗಳವಾರ ಕಾರ್ಯಕ್ಷಮತೆಯಲ್ಲಿ ಹೊಸ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದು, ಆರನೇ ಸೆಮಿಸ್ಟರ್‌ ಎಂಜಿನಿಯರಿಂಗ್ ಪರೀಕ್ಷೆ ಮುಕ್ತಾಯಗೊಂಡ ಕೇವಲ ಐದು ನಿಮಿಷಗಳಲ್ಲಿ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆಯು ಸಂಜೆ 5.30ಕ್ಕೆ ಮುಕ್ತಾಯಗೊಂಡಿತ್ತು.

2025-2026ನೇ ಶೈಕ್ಷಣಿಕ ವರ್ಷದ ಒಟ್ಟು 60,856 ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ಕಳೆದ ತಿಂಗಳು ಅಂತಿಮ ಸೆಮಿಸ್ಟರ್‌ ಎಂಜಿನಿಯರಿಂಗ್ ಪರೀಕ್ಷೆಗೆ ಹಾಜರಾಗಿದ್ದ 56,192 ವಿದ್ಯಾರ್ಥಿಗಳ ಫಲಿತಾಂಶವನ್ನು ಕೇವಲ 10 ನಿಮಿಷಗಳಲ್ಲಿ ಪ್ರಕಟಿಸುವ ಮೂಲಕ ನಿರ್ಮಿಸಿದ್ದ ತನ್ನದೇ ದಾಖಲೆಯನ್ನು ವಿಟಿಯು ಇದೀಗ ಮುರಿದಿದೆ.

ಕಳೆದ ಮೂರು ವರ್ಷಗಳಲ್ಲಿ ಆರನೇ ಸೆಮಿಸ್ಟರ್‌ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಕ್ರಮವಾಗಿ 10 ದಿನ, 11 ದಿನ ಮತ್ತು 10 ದಿನಗಳು ಬೇಕಾಗಿತ್ತು. ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿದರೆ, 2024-2025ರಲ್ಲಿ 58,232, 2023-2024ರಲ್ಲಿ 49,997 ಹಾಗೂ 2022-2023ರಲ್ಲಿ 41,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಹಾಗೂ ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ. ಯು.ಜೆ. ಉಜ್ವಲ್ ಜಂಟಿಯಾಗಿ ಪ್ರಕಟಿಸಿದರು.

ಫಲಿತಾಂಶವನ್ನು ಸಾಧ್ಯವಾದಷ್ಟು ಬೇಗ ಪ್ರಕಟಿಸಲು ನಾವು ನಿರ್ಧರಿಸಿದ್ದೆವು. ಸಮರ್ಪಕ ಸಿದ್ಧತೆಯೊಂದಿಗೆ ಪರೀಕ್ಷೆ ಮುಗಿದ ತಕ್ಷಣವೇ ಫಲಿತಾಂಶವನ್ನು ಪ್ರಕಟಿಸಲು ಸಾಧ್ಯವಾಯಿತು. ಈ ಹಿಂದೆ ಅಂತಿಮ ವರ್ಷದ ಫಲಿತಾಂಶವನ್ನು 10 ನಿಮಿಷಗಳಲ್ಲಿ ಪ್ರಕಟಿಸಲಾಗಿತ್ತು ಎಂದು ಪ್ರೊ. ಎಸ್. ವಿದ್ಯಾಶಂಕರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!