ಡಿಕೆ.ಶಿವಕುಮಾರ್ 
ರಾಜ್ಯ

ಗಣಿ ಹರಾಜು ಪಡೆದೂ ಗಣಿಗಾರಿಕೆ ಆರಂಭಿಸದವರ ಪಟ್ಟಿ ನೀಡಿ; ಅಧಿಕಾರಿಗಳಿಗೆ ಸಿಎಂ ಡಿಕೆ.ಶಿವಕುಮಾರ್ ಸೂಚನೆ

ರಾಜ್ಯದಲ್ಲಿ ಗಣಿಗಾರಿಕೆಗಾಗಿ ಭೂಮಿ ಪಡೆದಿರುವವರ ಸಂಖ್ಯೆ, ಪ್ರಸ್ತುತ ಅವರ ಸ್ಥಿತಿ, ಇನ್ನೂ ಗಣಿಗಾರಿಕೆ ಆರಂಭಿಸದವರ ಪಟ್ಟಿ, ಅದಕ್ಕೆ ಕಾರಣಗಳು, ಅರಣ್ಯ ಇಲಾಖೆಯಿಂದ ಅನುಮತಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಹಾಗೂ ವಿಳಂಬಕ್ಕೆ ಕಾರಣಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ.

ಬೆಂಗಳೂರು: ಗಣಿ ಪ್ರದೇಶವನ್ನು ಹರಾಜು ಮೂಲಕ ಪಡೆದುಕೊಂಡ ಬಳಿಕ ನಿಗದಿತ ಕನಿಷ್ಠ ಅವಧಿಯೊಳಗೆ ಗಣಿಗಾರಿಕೆ ಆರಂಭಿಸುವ ಕುರಿತು ಸ್ಪಷ್ಟ ನಿಯಮ ರೂಪಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಸ್ತುತ ಗಣಿ ನೀತಿಯ ಜೊತೆಗೆ ಇತರ ರಾಜ್ಯಗಳ ಗಣಿ ನೀತಿ, ನಿಯಮಗಳು ಹಾಗೂ ಕಾನೂನುಗಳ ಸಮಗ್ರ ಅಧ್ಯಯನ ನಡೆಸಿ ಸೂಕ್ತ ನಿಯಮಾವಳಿ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ ಹರಾಜಿನ ಮೂಲಕ ಗಣಿ ಪ್ರದೇಶಗಳನ್ನು ಪಡೆದುಕೊಂಡು ವರ್ಷಗಳಾದರೂ ಗಣಿಗಾರಿಕೆ ಆರಂಭಿಸದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಗಣಿಗಾರಿಕೆಗಾಗಿ ಭೂಮಿ ಪಡೆದಿರುವವರ ಸಂಖ್ಯೆ, ಪ್ರಸ್ತುತ ಅವರ ಸ್ಥಿತಿ, ಇನ್ನೂ ಗಣಿಗಾರಿಕೆ ಆರಂಭಿಸದವರ ಪಟ್ಟಿ, ಅದಕ್ಕೆ ಕಾರಣಗಳು, ಅರಣ್ಯ ಇಲಾಖೆಯಿಂದ ಅನುಮತಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಹಾಗೂ ವಿಳಂಬಕ್ಕೆ ಕಾರಣಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಇಲಾಖೆಯ ಆದಾಯ ಸಂಗ್ರಹದ ಮಾಹಿತಿ ಕೂಡ ಪರಿಶೀಲಿಸಲಾಯಿತು. 2025-26ನೇ ಸಾಲಿನಲ್ಲಿ ಇಲಾಖೆಗೆ ನಿಗದಿಪಡಿಸಿದ್ದ ಆದಾಯ ಗುರಿಯ ಶೇ.98ರಷ್ಟು ಸಾಧನೆಯಾಗಿದ್ದು, ಒಟ್ಟು ರೂ.8,845.39 ಕೋಟಿ ಆದಾಯ ಸಂಗ್ರಹಿಸಲಾಗಿದೆ. 2026-27ನೇ ಸಾಲಿನಲ್ಲಿ ಇದುವರೆಗೆ 1,164.11 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದೇ ವೇಳೆ, 2025-26ರಲ್ಲಿ ಅಕ್ರಮ ಹಾಗೂ ಅನಧಿಕೃತ ಗಣಿಗಾರಿಕೆಗೆ ಸಂಬಂಧಿಸಿದ 6,301 ಪ್ರಕರಣಗಳು ಪತ್ತೆಯಾಗಿದ್ದು, ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ 31.26 ಕೋಟಿ ರೂ.ದಂಡ ವಸೂಲಿ ಮಾಡಲಾಗಿದ್ದು, 268 ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಸಭೆಯಲ್ಲಿ ತಿಳಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video