ಸಿಎಂ ಡಿಕೆ ಶಿವಕುಮಾರ್ online desk
ರಾಜ್ಯ

ಕ್ವಾರಿ ದುರಂತ; ಸ್ಫೋಟದಿಂದ ಈ ದುರಂತ ಸಂಭವಿಸಿಲ್ಲ- ಸಿಎಂ ಡಿಕೆ ಶಿವಕುಮಾರ್

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಬೆಂಗಳೂರು: “ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

“ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಫೋಟದಿಂದಾಗಿ ಇದು ಸಂಭವಿಸಿಲ್ಲ ಎಂಬ ಮಾಹಿತಿ ಬಂದಿದ್ದು, ಈ ಕ್ವಾರಿ ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಇಲ್ಲವೇ ಎಂಬ ವರದಿಯನ್ನು ಪಡೆದು ನಂತರ ಕ್ರಮ ಕೈಗೊಳ್ಳಲಾಗುವುದು. ಕ್ವಾರಿ ನಡೆಸುವಾಗ ಅದರದೇ ಆದ ನಿಯಮಗಳಿದ್ದು, ಅವುಗಳ ಪಾಲನೆಯಾಗುತ್ತಿವೆಯೇ ಇಲ್ಲವೇ ಎಂಬ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

ಕಳೆದ ಬಾರಿ ಸ್ಫೋಟದ ವೇಳೆ ಚಿರತೆ ಸತ್ತಿತ್ತು ಈ ಹಿಂದೆ ತನಿಖೆ ಮಾಡದೇ ಪ್ರಕರಣ ಮುಚ್ಚಿಹಾಕಲಾಗಿತ್ತು ಎಂಬ ಸ್ಥಳೀಯ ಶಾಸಕರ ಆರೋಪದ ಬಗ್ಗೆ ಕೇಳಿದಾಗ, “ಶಾಸಕರು ನಮಗೆ ಮಾಹಿತಿ ನೀಡಿದ್ದು, ಅಧಿಕೃತ ವರದಿ ತರಿಸಿಕೊಂಡು ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ಪರಿಹಾರದ ವಿಚಾರವಾಗಿ ಕೇಳಿದಾಗ, “ಮೊದಲು ಎಷ್ಟು ಜನ ಸತ್ತಿದ್ದಾರೆ ಎಂಬ ಮಾಹಿತಿ ಬರಲಿ, ಆನಂತರ ಪರಿಹಾರದ ಬಗ್ಗೆ ತೀರ್ಮಾನ ಮಾಡೋಣ. ತರಾತುರಿಯಲ್ಲಿ ಪರಿಹಾರ ಘೋಷಿಸಿದ ಮಾತ್ರಕ್ಕೆ ಸತ್ತವರು ಮರಳಿ ಬರುವುದಿಲ್ಲ. ಇದಕ್ಕೆಲ್ಲಾ ಅದರದೇ ಆದ ಪ್ರಕ್ರಿಯೆಗಳಿವೆ. ಖಂಡಿತವಾಗಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಬಹಳ ಮುಖ್ಯ” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಪಶ್ಚಿಮ ಬಂಗಾಳ: ದೇವಸ್ಥಾನ ಸಮೀಪದ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ: 7 ಯಾತ್ರಿಕರು ಸಜೀವ ದಹನ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನನ್ ಕಾರನ್ನೇ ನಿಲ್ಲಿಸ್ತೀಯಾ?': ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ, JDS ನಾಯಕನ ಬಂಧನ, Video