ಸಂಗ್ರಹ ಚಿತ್ರ 
ರಾಜ್ಯ

'ಗುರುದಕ್ಷಿಣೆಯೇ ನಮ್ಮ ಆದಾಯ, ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ', ನಮಗೆ ನೋಂದಣಿಯ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ RSS ತಿರುಗೇಟು

ಆರ್‌ಎಸ್‌ಎಸ್ ಯಾವುದೇ ಕೈಗಾರಿಕೋದ್ಯಮಿಗಳು, ರಾಜಕಾರಣಿಗಳು ಅಥವಾ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವುದಿಲ್ಲ. ಸಂಘದ ಸ್ವಯಂಸೇವಕರು ವರ್ಷಕ್ಕೊಮ್ಮೆ 'ಗುರುದಕ್ಷಿಣೆ' ರೂಪದಲ್ಲಿ ಸ್ವಯಂಪ್ರೇರಿತವಾಗಿ ನೀಡುವ ಕೊಡುಗೆಯೇ ಸಂಘದ ಪ್ರಮುಖ ಆರ್ಥಿಕ ಮೂಲ.

ಬೆಳಗಾವಿ: ಆರ್‌ಎಸ್‌ಎಸ್‌ಗೆ ಬರುವ ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ. ಸರ್ಕಾರ ಎಲ್ಲ ಸಂಘಟನೆಗಳಿಗೆ ನೋಂದಣಿಯನ್ನು ಕಡ್ಡಾಯಗೊಳಿಸುವ ಕಾನೂನು ತಂದರೆ, ನಾವು ಅದನ್ನು ಪಾಲಿಸುತ್ತೇವೆ" ಎಂದು ಆರ್‌ಎಸ್‌ಎಸ್ ನೋಂದಣಿ ಹಾಗೂ ಹಣಕಾಸು ಪಾರದರ್ಶಕತೆ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿರುವ ಪ್ರಶ್ನೆಗಳಿಗೆ ತಿರುಗೇಟು ನೀಡಿದೆ.

ಬೆಳಗಾವಿಯಲ್ಲಿ ನಡೆದ ಆರ್‌ಎಸ್‌ಎಸ್ ಚಿಂತನ-ಮಂಥನ ಸಭೆಯಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಪ್ರಚಾರಕ ಭರತ್‌ಕುಮಾರ್ ಅವರು, "ಆರ್‌ಎಸ್‌ಎಸ್‌ಗೆ ಬರುವ ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ. ಸರ್ಕಾರ ಎಲ್ಲ ಸಂಘಟನೆಗಳಿಗೆ ನೋಂದಣಿಯನ್ನು ಕಡ್ಡಾಯಗೊಳಿಸುವ ಕಾನೂನು ತಂದರೆ, ನಾವು ಅದನ್ನು ಪಾಲಿಸುತ್ತೇವೆ. ಪ್ರಸ್ತುತ ಇರುವ ಕಾನೂನು ವ್ಯವಸ್ಥೆಯ ಪ್ರಕಾರ ಆರ್‌ಎಸ್‌ಎಸ್ ಪ್ರತ್ಯೇಕವಾಗಿ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಕುಟುಂಬದ ಉದಾಹರಣೆ ನೀಡಿದ ಅವರು, "ಒಂದು ಕುಟುಂಬವನ್ನು ಸಂಸ್ಥೆಯಾಗಿ ನೋಂದಾಯಿಸದೇ ಅದರ ಸದಸ್ಯರು ಒಟ್ಟಾಗಿ ಕುಟುಂಬದ ಖರ್ಚು-ವೆಚ್ಚಗಳನ್ನು ನಿರ್ವಹಿಸುವಂತೆ, ಆರ್‌ಎಸ್‌ಎಸ್ ಕೂಡ ಈಗಿನ ಕಾನೂನು ವ್ಯಾಪ್ತಿಯಲ್ಲೇ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಆರ್‌ಎಸ್‌ಎಸ್ ಯಾವುದೇ ಕೈಗಾರಿಕೋದ್ಯಮಿಗಳು, ರಾಜಕಾರಣಿಗಳು ಅಥವಾ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವುದಿಲ್ಲ ಎಂದು ಹೇಳಿದ ಅವರು, ಸಂಘದ ಸ್ವಯಂಸೇವಕರು ವರ್ಷಕ್ಕೊಮ್ಮೆ 'ಗುರುದಕ್ಷಿಣೆ' ರೂಪದಲ್ಲಿ ಸ್ವಯಂಪ್ರೇರಿತವಾಗಿ ನೀಡುವ ಕೊಡುಗೆಯೇ ಸಂಘದ ಪ್ರಮುಖ ಆರ್ಥಿಕ ಮೂಲ ಎಂದು ತಿಳಿಸಿದರು.

"ಸಂಘಕ್ಕೆ ಬರುವ ಪ್ರತಿಯೊಂದು ರೂಪಾಯಿಗೂ ಸರಿಯಾದ ಲೆಕ್ಕ ಇರುತ್ತದೆ. ಸ್ವೀಕರಿಸಿದ ಹಣವನ್ನು ಮರುದಿನವೇ ಸಂಘದ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಒಂದು ರೂಪಾಯಿಯನ್ನೂ ನಗದು ರೂಪದಲ್ಲಿ ಉಳಿಸಿಕೊಳ್ಳುವುದಿಲ್ಲ. ಯಾವುದೇ ಕಾರ್ಯಕ್ರಮಕ್ಕೆ ಎಷ್ಟು ಹಣ ಅಗತ್ಯವಿದೆಯೋ ಅಷ್ಟನ್ನೇ ಸಂಗ್ರಹಿಸಲಾಗುತ್ತದೆ. ಪ್ರತಿಯೊಂದು ಖರ್ಚಿನ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತದೆ" ಎಂದು ಹೇಳಿದರು.

ಇದೇ ವೇಳೆ, ಬೆಳಗಾವಿಯಲ್ಲಿ ಜುಲೈ 10ರಿಂದ 12ರವರೆಗೆ ಆರ್‌ಎಸ್‌ಎಸ್‌ನ ವಾರ್ಷಿಕ 'ಅಖಿಲ ಭಾರತೀಯ ಪ್ರಾಂತ ಪ್ರಚಾರಕ ಬೈಠಕ್' ನಡೆಯಲಿದ್ದು, ದೇಶದ ವಿವಿಧ ರಾಜ್ಯಗಳ ಹಿರಿಯ ಪ್ರಚಾರಕರು ಹಾಗೂ ಸಂಘದ ಉನ್ನತ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರು ಜುಲೈ 6ರಂದು ಬೆಳಗಾವಿಗೆ ಆಗಮಿಸಲಿದ್ದು, ಸುಮಾರು 8 ದಿನಗಳ ಕಾಲ ನಗರದಲ್ಲೇ ತಂಗಲಿದ್ದಾರೆ ಎಂದು ಸಂಘದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ಮೀನುಗಾರನ ಮುಖಕ್ಕೆ ಅಂಟಿಕೊಂಡ ಅಕ್ಟೋಪಸ್! ಪ್ರಾಣ ಉಳಿಸಿಕೊಳ್ಳಲು ಯುವಕನ ಹರಸಾಹಸ, ಭಯಾನಕ Video ವೈರಲ್