ಸಾವನ್ನಪ್ಪಿದ ವಿದ್ಯಾರ್ಥಿ 
ರಾಜ್ಯ

ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಸ್ಟೂಡೆಂಟ್: ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ತಲೆಯೇ ಕಟ್!

ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್, ಬಸ್‌ಗೆ ಸಮೀಪವಾಗಿ ಹಾದುಹೋಗುವಾಗ ಯುವಕನ ತಲೆಗೆ ತಗುಲಿ ಯುವಕನ ರುಂಡ ತುಂಡಾಗಿ ಕೆಳಗಡೆ ಬಿದ್ದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹುಬ್ಬಳ್ಳಿ : ಬಸ್ ಪ್ರಯಾಣದ ವೇಳೆ ಕಿಟಕಿಯಿಂದ ತಲೆ ಹೊರಹಾಕಿದ್ದ ಯುವಕನಿಗೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಯುವಕನ ರುಂಡ ತುಂಡಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶೆರೆವಾಡ ಗ್ರಾಮದ ಸಮೀಪ ನಡೆದಿದೆ.

ಮೃತ ಯುವಕನನ್ನು ಶಿರೂರು ಗ್ರಾಮದ ಪಕ್ಕಿರಯ್ಯ ಚನ್ನಯ್ಯ ಮುತ್ತಳ್ಳಿಮಠ (18) ಎಂದು ಗುರುತಿಸಲಾಗಿದೆ. ಪಕ್ಕಿರಯ್ಯ ಹುಬ್ಬಳ್ಳಿಯಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದು, ಲಕ್ಷ್ಮೇಶ್ವರ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ. ಬಸ್‌ನ ಹಿಂಬದಿ ಆಸನದಲ್ಲಿ ಕುಳಿತಿದ್ದ ಆತ ಕಿಟಕಿಯಿಂದ ತಲೆ ಹೊರಹಾಕಿದ್ದಾನೆ ಎನ್ನಲಾಗಿದೆ.

ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್, ಬಸ್‌ಗೆ ಸಮೀಪವಾಗಿ ಹಾದುಹೋಗುವಾಗ ಯುವಕನ ತಲೆಗೆ ತಗುಲಿ ಯುವಕನ ರುಂಡ ತುಂಡಾಗಿ ಕೆಳಗಡೆ ಬಿದ್ದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಪಘಾತದ ಬಳಿಕ ಬಸ್ ಚಾಲಕ ವಾಹನವನ್ನು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!