ರಾಷ್ಟ್ರಪತಿ ದ್ರೌಪದಿ ಮುರ್ಮು 
ರಾಜ್ಯ

ಬೆಂಗಳೂರು ಕಲ್ಲು ಕ್ವಾರಿ ದುರಂತ ಅತ್ಯಂತ ನೋವಿನ ಘಟನೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೃಹತ್ ಗ್ರಾನೈಟ್ ಬಂಡೆ ಕುಸಿದು ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ.

ನವದೆಹಲಿ: ಕರ್ನಾಟಕದ ಬೆಂಗಳೂರಿನ ಮಾಗಡಿ ರಸ್ತೆ ಬಳಿ ಇರುವ ಎರಡು ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಎಂಟು ಜನ ಮೃತಪಟ್ಟಿದ್ದು,ಜೀವಹಾನಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೃಹತ್ ಗ್ರಾನೈಟ್ ಬಂಡೆ ಕುಸಿದು ಎಂಟು ಕಾರ್ಮಿಕರು ಮೃತಪಟ್ಟಿದ್ದು, ಅವರಲ್ಲಿ ಹೆಚ್ಚಾಗಿ ಬಿಹಾರದ ಮೂಲದವರಾಗಿದ್ದಾರೆ.

"ಕರ್ನಾಟಕದ ಬೆಂಗಳೂರು ನಗರ ಜಿಲ್ಲೆಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖಿತಳಾಗಿದ್ದೇನೆ. ಇದು ಅತ್ಯಂತ ನೋವಿನ ಘಟನೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಮುರ್ಮು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!