ಡಾ.ಜಿ.ಪರಮೇಶ್ವರ್‌ ಭೇಟಿಯಾದ KDEM ನಿಯೋಗ 
ರಾಜ್ಯ

ರಾಜ್ಯದ ಡಿಜಿಟಲ್ ವ್ಯವಸ್ಥೆಗೆ ಮತ್ತಷ್ಟು ಬಲ: DCM ಡಾ.ಜಿ.ಪರಮೇಶ್ವರ್‌ ಭೇಟಿಯಾದ KDEM ನಿಯೋಗ!

ತುಮಕೂರಿನ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ವಿವಿಧ ಉಪಕ್ರಮಗಳ ಬಗ್ಗೆಯೂ ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಬೆಂಗಳೂರು: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ನಿಯೋಗವು ಇಂದು ಉಪ ಮುಖ್ಯಮಂತ್ರಿ ಆಗಿರುವ ಕಂದಾಯ ಮತ್ತು ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್‌ ಅವರನ್ನು ಸದಾಶಿವನಗರದ ಗೃಹ ಕಚೇರಿಯಲ್ಲಿ ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಕರ್ನಾಟಕವನ್ನು ಡಿಜಿಟಲ್ ಪರಿವರ್ತನೆಯ ಕ್ಷೇತ್ರದಲ್ಲಿ ಇನ್ನಷ್ಟು ಮುಂಚೂಣಿಯಲ್ಲಿರಿಸುವ ದೂರದೃಷ್ಟಿ, ಭವಿಷ್ಯದ ಕಾರ್ಯಯೋಜನೆಗಳು ಹಾಗೂ ರಾಜ್ಯದ ಬ್ರ್ಯಾಂಡಿಂಗ್ ಕಾರ್ಯತಂತ್ರದ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಜೊತೆಗೆ, ತುಮಕೂರಿನ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ವಿವಿಧ ಉಪಕ್ರಮಗಳ ಬಗ್ಗೆಯೂ ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಕರ್ನಾಟಕದ ಡಿಜಿಟಲ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು, ನಾವೀನ್ಯತೆ, ಹೂಡಿಕೆ ಮತ್ತು ಸಮಗ್ರ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಜೊತೆಗೆ ನಮ್ಮ ಸರ್ಕಾರ ನಿರಂತರ ಸಹಕಾರ ನೀಡಲಿದೆ ಎಂದು ಡಾ.ಜಿ.ಪರಮೇಶ್ವರ್‌ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಧ್ಯಕ್ಷರಾದ ಬಿ.ವಿ. ನಾಯ್ಡು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ್ ಗುಪ್ತಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!