ಹೊತ್ತಿ ಉರಿದ ಕೇರಳ ಸಾರಿಗೆ ಬಸ್‌ 
ರಾಜ್ಯ

ಬೆಂಗಳೂರು: ರಸ್ತೆ ಮಧ್ಯೆ ಹೊತ್ತಿ ಉರಿದ ಕೇರಳ ಸಾರಿಗೆ ಬಸ್‌; ತಪ್ಪಿದ ದೊಡ್ಡ ಅನಾಹುತ!

ಇಂದು ಸಂಜೆ 6 ಗಂಟೆ ಸುಮಾರಿಗೆ ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕೇರಳ ಸಾರಿಗೆ ಬಸ್, ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಜ್ಞಾನ ಭಾರತಿ ಮೆಟ್ರೋ ನಿಲ್ದಾಣ ಬಳಿ ರಸ್ತೆ ಮಧ್ಯೆಯೇ ಕೇರಳ ಸರ್ಕಾರಿ ಬಸ್ಸೊಂದು ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಇಂದು ಸಂಜೆ 6 ಗಂಟೆ ಸುಮಾರಿಗೆ ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕೇರಳ ಸಾರಿಗೆ ಬಸ್, ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಬಸ್ ಇಂಜಿನ್ ಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣ ಬಸ್ ನಿಲ್ಲಿಸಿ ಎಚ್ಚರಿಕೆಯ ಕ್ರಮ ಕೈಗೊಂಡಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಕೂಡಲೇ ಕೆಳಗಿಳಿಸಿದ ಪರಿಣಾಮ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಬೆಂಕಿಯಿಂದಾಗಿ ಬಸ್‌ನ ಮುಂಭಾಗ ಹಾಗೂ ಒಳ ಭಾಗ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು, ಕಂಡಕ್ಟರ್‌ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಗ್ನಿ ಅವಘಡದಿಂದ ದಟ್ಟ ಹೊಗೆ ಆವರಿಸಿದ್ದು, ಕೆಲ ಕಾಲ ಜನರ ಆತಂಕಕ್ಕೆ ಕಾರಣವಾಗಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video

'ಸ್ವಂತ ಕೆಲಸದ ಮೇಲೆ ನಂಬಿಕೆ ಇಲ್ಲವೇ?': ಸಚಿವರು, ಅಧಿಕಾರಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ?; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ