ಹಾಸನ: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರ, 'ರಾಷ್ಟ್ರಪಡೆ'ಯ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ರಜಾಕ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ಅವರ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿ, ಬಂಧಿಸಿ ಕರೆದೊಯ್ದಿದ್ದಾರೆ. ನನಗೆ ಜೀವ ಬೆದರಿಕೆ ಇದೆ, ಅಬ್ದುಲ್ ರಜಾಕ್ ವಿರುದ್ಧ ನಾನು ದೂರು ಕೊಟ್ಟಿದ್ದೇನೆ. ಅವನನ್ನು ಬಂಧಿಸದೇ ನನ್ನನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಆಕ್ರೋಶ ಹೊರಹಾಕಿದ್ದಾರೆ.