ನಟ ದರ್ಶನ್ ಮತ್ತು ಸುಪ್ರೀಂ ಕೋರ್ಟ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್‌; ʻದಾಸʼನಿಗೆ 1 ವರ್ಷ ಜೈಲೇ ಗತಿ!

ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ಅದೇಶ ನೀಡಿದ್ದು, ಈ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೆ ಶಾಕ್ ನೀಡಿದ್ದು, ʻದಾಸʼಇನ್ನೂ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ.

ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

ನಂತರ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ಅದೇಶ ನೀಡಿದ್ದು, ಈ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಖುದ್ದು ಸುಪ್ರೀಂ ಕೋರ್ಟ್‌ನ ರಿಜಿಸ್ಟರ್‌ ಅವರೇ ಅರ್ಜಿಯನ್ನ ತಿರಸ್ಕರಿಸಿದ್ದಾರೆ.

ತುರ್ತು ಪರಿಸ್ಥಿತಿಗಳಲ್ಲಿ ಜಾಮೀನು ಕೋರಲು ಅವಕಾಶ ನೀಡುವಂತೆ ಕೋರಿ ಆರೋಪಿ ದರ್ಶನ್‌ ಮನವಿ ಮಾಡಿದ್ದರು. ಆದರೆ ಇದು ಅರ್ಹವಲ್ಲದ ಅರ್ಜಿ, ವಿಚಾರಣೆಗೆ ಪಟ್ಟಿ ಮಾಡಲು ಸಾಧ್ಯವಿಲ್ಲ ಎಂದು ದರ್ಶನ್ ಪರ ವಕೀಲರಿಗೆ ಮಾಹಿತಿ ನೀಡಿ ಅರ್ಜಿ ತಿರಸ್ಕರಿಸಲಾಗಿದೆ.

ಈ ಹಿಂದೆ, ಪ್ರಕರಣದಲ್ಲಿ 273 ಸಾಕ್ಷಿಗಳ ಪೈಕಿ 15 ಸಾಕ್ಷಿಗಳ ವಿಚಾರಣೆಯಷ್ಟೇ ಮುಗಿದಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ. ಇದೇ ರೀತಿಯಾದರೆ ವಿಚಾರಣೆ ಮುಗಿಯಲು ಹಲವು ವರ್ಷ ಬೇಕಾಗುತ್ತದೆ. ಹೀಗಾಗಿ, ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಕಳೆದ ಮೇ 15 ರಂದು ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ್ದ ಸುಪ್ರೀಂ ಕೋರ್ಟ್‌, ಅಲ್ಲಿಯವರೆಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಆದೇಶದ ಅನ್ವಯ ಮುಂದಿನ ವರ್ಷ ಮೇ 15ರ ವರೆಗೆ ದರ್ಶನ್‌ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಕ್ರಮವಾಗಿ ಮಸೀದಿಗಳಲ್ಲಿ SIR: ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು; ವಿಡಿಯೋ ರಿಲೀಸ್‌

ದಾವಣಗೆರೆ: ಕಲ್ಲಿನಿಂದ ತಲೆ ಜಜ್ಜಿ ಬರ್ಬರವಾಗಿ ಪತಿ ಹತ್ಯೆಗೈದ ಪತ್ನಿ; ಸಾಥ್​ ನೀಡಿದ ಪುತ್ರ! ಇಲ್ಲಿದೆ ಕಾರಣ...

ಶಾಂತಿ ಮಾತುಕತೆಗೆ ಅಡ್ಡಿ: Iran ಸಂಧಾನಕಾರರ ಹತ್ಯೆಗೆ Israel ಭಾರೀ ಸಂಚು; ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಎಚ್ಚರಿಕೆ ರವಾನಿಸಿದ ಅಮೆರಿಕಾ..!

Voter ID, PAN.. ಪೌರತ್ವ ಸಾಬೀತಿಗೆ ಸಲ್ಲಿಸಿದ್ದ 16 ದಾಖಲೆಗಳನ್ನೂ ತಿರಸ್ಕರಿಸಿದ ಹೈಕೋರ್ಟ್: ನ್ಯಾಯಾಧೀಶರು ಹೇಳಿದ್ದೇನು?

ಗೃಹ ಜ್ಯೋತಿ ಪರಿಶೀಲನೆ: ಜಾತಿ ಪ್ರಮಾಣ ಪತ್ರ ಕಡ್ಡಾಯನಾ? ಸ್ಪಷ್ಟನೆ ಕೊಟ್ಟ ಬೆಸ್ಕಾಂ!