ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಚಾಪೆಯಡಿ ಮಕ್ಕಳ ಜೊತೆಯೇ ಮಲಗಿತ್ತು ಬೃಹತ್ ನಾಗರಹಾವು; ಮಕ್ಕಳು ಪಾರು

ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟ ಬಳಿಯ ಗುಡ್ಡದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಚಾಪೆ ಹಾಸಿಕೊಂಡು ಬೆಚ್ಚನೆಯ ಬೆಡ್‌ಶೀಟ್‌ ಹೊದ್ದುಕೊಂಡು ನೆಮ್ಮದಿಯಾಗಿ ಮಲಗಿದ್ದ ಮಕ್ಕಳು ಅದೃಷ್ಟವಶಾತ್‌ ಬಚಾವ್‌ ಆಗಿದ್ದಾರೆ.

ಬೆಂಗಳೂರು: ಮನೆಯಲ್ಲಿ ಮಕ್ಕಳ ಜೊತೆಗೆ ಪೋಷಕರು ಮಲಗಿದ್ದ ವೇಳೆ ನಾಗರಹಾವೊಂದು ಪ್ರತ್ಯಕ್ಷವಾಗಿ ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಹೆಸರುಘಟ್ಟ ಬಳಿಯ ಗುಡ್ಡದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಚಾಪೆ ಹಾಸಿಕೊಂಡು ಬೆಚ್ಚನೆಯ ಬೆಡ್‌ಶೀಟ್‌ ಹೊದ್ದುಕೊಂಡು ನೆಮ್ಮದಿಯಾಗಿ ಮಲಗಿದ್ದ ಮಕ್ಕಳು ಅದೃಷ್ಟವಶಾತ್‌ ಬಚಾವ್‌ ಆಗಿದ್ದಾರೆ.

ಬಿಹಾರ ಮೂಲದ ತಾಯಿ ಮತ್ತು ಮಕ್ಕಳು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ತಾಯಿ ಅಂಜು ರಾತ್ರಿ 11 ಗಂಟೆ ಸುಮಾರಿನಲ್ಲಿ ಮೂತ್ರ ವಿಸರ್ಜನೆಗೆಂದು ಎದ್ದಾಗ 7 ವರ್ಷದ ಮಗಳು ರಾಶಿ ಮತ್ತು 4 ವರ್ಷದ ಮಗ ಅನುಮೋನ ಪಕ್ಕದಲ್ಲಿದ್ದ ನಾಗರಹಾವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

ಅದು ಎಲ್ಲಿ ಮಕ್ಕಳನ್ನು ಕಚ್ಚಿಬಿಡುತ್ತೋ ಎಂಬ ಆತಂಕದಲ್ಲಿ ಮನೆಯಿಂದ ಹೊರಬಂದು ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣವೇ ಉರಗ ರಕ್ಷಕರಾದ ಪ್ರಶಾಂತ್ ಗೆ ಕರೆ ಮಾಡಿದ್ದಾರೆ.

ಪ್ರಶಾಂತ್‌ ತಮ್ಮ ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆಹಿಡಿದಿದ್ದಾರೆ. ಉರಗ ರಕ್ಷಕರ ಸಕಾಲಿಕ ಸ್ಪಂದನೆಯಿಂದಾಗಿ ಪುಟ್ಟ ಮಕ್ಕಳು ಜೀವಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪೋಷಕರು ಪ್ರಶಾಂತ್‌ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಪ್ರಶಾಂತ್‌ ಹಾವನ್ನು ಅರಣ್ಯಕ್ಕೆ ಬಿಟ್ಟಿದ್ದಾರೆ. ಬರೋಬ್ಬರಿ 5 ಅಡಿ ಉದ್ದವಿದ್ದ ನಾಗರಹಾವನ್ನು ಉರಗ ರಕ್ಷಕರ ಮೂಲಕ ರಕ್ಷಣೆ ಮಾಡಲಾಗಿದೆ. ಹಾವಿನಿಂದ ಯಾವುದೇ ತೊಂದರೆಯಾಗದಂತೆ ಮೊದಲು ಮಕ್ಕಳನ್ನು ರಕ್ಷಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video