ಸಿದ್ದರಾಮಯ್ಯ ಮತ್ತು ಯತೀಂದ್ರ 
ರಾಜ್ಯ

ಜಾತಿಗಣತಿ ಸಿದ್ದರಾಮಯ್ಯನವರ ಕನಸಿನ ಕೂಸು; ವರದಿ ಸ್ವೀಕರಿಸಿದ್ದೇವೆ, ಜಾರಿ ಮಾಡುತ್ತೇವೆ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಜಾತಿಗಣತಿ ವರದಿಯನ್ನು ಜಾರಿಗೊಳಿಸಬೇಕು ಎಂದುಕೊಂಡಿದ್ದರು, ಅದನ್ನು ನಾವು ಜಾರಿ ಮಾಡುತ್ತೇವೆ. ಅದು ಕ್ಯಾಬಿನೆಟ್ ಮುಂದೆ ಚರ್ಚೆಗೆ ಬರಬೇಕಿದೆ.

ದಾವಣಗೆರೆ: ಸಿದ್ದರಾಮಯ್ಯ ಅವರು ಇನ್ನೂ ಎರಡು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ ಅಂದುಕೊಂಡಿದ್ದೆವು, ಕಾರಣಾಂತರಗಳಿಂದ ಆ ಸ್ಥಾನದಿಂದ ಕೆಳಗಿಳಿದಿದ್ದಾರೆ. ಅದರೆ, ಅವರ ಕನಸಿನ ಕೂಸು ಜಾತಿಗಣತಿ ಸ್ವೀಕರಿಸಿದ್ದೇವೆ, ಜಾರಿ ಮಾಡುತ್ತೇವೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಜಾತಿಗಣತಿ ವರದಿಯನ್ನು ಜಾರಿಗೊಳಿಸಬೇಕು ಎಂದುಕೊಂಡಿದ್ದರು, ಅದನ್ನು ನಾವು ಜಾರಿ ಮಾಡುತ್ತೇವೆ. ಅದು ಕ್ಯಾಬಿನೆಟ್ ಮುಂದೆ ಚರ್ಚೆಗೆ ಬರಬೇಕಿದೆ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಜಾತಿಗಣತಿ ಬಿಡುಗಡೆ ಮಾಡುವುದಾಗಿ ಹೇಳಿದ್ದೆವು, ಬಿಡುಗಡೆ ಮಾಡುತ್ತೇವೆ ಎಂದರು.

ನಿನ್ನೆ ನಡೆದ ಕ್ಯಾಬಿನೆಟ್​​ನಲ್ಲಿ 23 ಅಜೆಂಡಾಗಳು ಇದ್ದವು. ಮುಖ್ಯಮಂತ್ರಿಗಳು ಹೊಸದಾಗಿ ಪ್ರಜಾಸೇವೆ ಇಲಾಖೆ ಆರಂಭಿಸಿದ್ದಾರೆ. ಭಾರತ್ ಜೋಡೋ ಯುವಕರ ಸಂಘದಿಂದ ಪಕ್ಷ ಸಂಘಟಿಸುವ ನಿರ್ಧಾರ ಮಾಡಲಾಗಿದೆ. ಅಲ್ಲದೇ ಎಸ್​ಐಆರ್​​ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ‌ ನಡೆದವು ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ಅದು ಹೈಕಮಾಂಡ್​ಗೆ ಬಿಟ್ಟ ವಿಚಾರ. ಎರಡು ವಾರದಲ್ಲಿ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಸಂಪುಟದಲ್ಲಿ ಹೊಸಬರು ಹಾಗೂ ಹಳಬರು ಕೂಡ ಇರಬೇಕು. ಎಲ್ಲ ವಿಚಾರವನ್ನು ಹೈಕಮಾಂಡ್​ಗೆ ಬಿಟ್ಟಿದ್ದೇವೆ, ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ.

ಹೊಸ ಸಿಎಂ ಪ್ರಮಾಣ ವಚನ ಸ್ವೀಕಾರ ಮಾಡಿ ಒಂದು ತಿಂಗಳಾಗಿದೆ. ನೂರು ದಿನಗಳ ಅಜೆಂಡಾ ಇದೆ. ಯಾರು ಬಡವರು, ಅರ್ಹರಿದ್ದಾರೆ ಅವರಿಗೆ ಗ್ಯಾರಂಟಿ ಕೊಡುತ್ತೇವೆ. ಜಾತಿ ಆಧಾರಿತವಾಗಿ ಗ್ಯಾರಂಟಿ ಯೋಜನೆ ನೀಡಿಲ್ಲ. ಯಾವ ಸಮುದಾಯದವರು ಎಷ್ಟು ಫಲಾನುಭವಿಗಳು ಇದ್ದಾರೆ ಅನ್ನೋ ನಿಟ್ಟಿನಲ್ಲಿ ಇರಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್