ಸಾಂದರ್ಭಿಕ ಚಿತ್ರ 
ರಾಜ್ಯ

ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ಜುಲೈ8 ರವರೆಗೆ ವಿಸ್ತರಣೆ!

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸುವ ಕಾಲಾವಕಾಶವನ್ನು ಜುಲೈ 8ರ ಸಂಜೆ 4 ಗಂಟೆಯವರೆಗೆ ವಿಸ್ತರಿಸಲಾಗಿದೆ

ಬೆಂಗಳೂರು: ರಾಜ್ಯದಲ್ಲಿ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ (CPC) ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕವನ್ನು ಪಾವತಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ವಿಸ್ತರಿಸಿ KEA ಆದೇಶ ಹೊರಡಿಸಿದೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದು, ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸುವ ಕಾಲಾವಕಾಶವನ್ನು ಜುಲೈ 8ರ ಸಂಜೆ 4 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ತಾಂತ್ರಿಕ ತೊಂದರೆಗಳು ಅಥವಾ ಇನ್ನಿತರ ಕಾರಣಗಳಿಂದಾಗಿ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಇದು ಕೊನೆಯ ಅವಕಾಶವಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಈಗಾಗಲೇ ಅರ್ಜಿ ಸಲ್ಲಿಸಿರುವ ಅಥವಾ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ತಮ್ಮ ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು KEA ವಿಶೇಷ ಅವಕಾಶವನ್ನು ಕಲ್ಪಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡ ನಂತರ, ಜುಲೈ 10 ರಿಂದ ಜುಲೈ 13ರ ವರೆಗೆ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಸಮಯಾವಕಾಶ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಪ್ರಾಧಿಕಾರವು ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯ ಪ್ರಕಾರ, ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 3 ಕಡೆಯ ದಿನವಾಗಿತ್ತು. ಹಾಗೂ ಆನ್‌ಲೈನ್ ಅಥವಾ ಚಲನ್ ಮೂಲಕ ಬ್ಯಾಂಕ್‌ಗಳಲ್ಲಿ ಶುಲ್ಕ ಪಾವತಿಸಲು ಜುಲೈ 4 ಅನ್ನು ಕಡೆಯ ದಿನಾಂಕ ಎಂದು ನಿಗದಿಗೊಳಿಸಲಾಗಿತ್ತು. ಆದರೆ, ಅಭ್ಯರ್ಥಿಗಳ ಹಿತದೃಷ್ಟಿಯಿಂದ ಈಗ ಈ ಅವಧಿಯನ್ನು ವಿಸ್ತರಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆ ಕ್ಷಣದವರೆಗೂ ಕಾಯದೆ, ಅಭ್ಯರ್ಥಿಗಳು ನಿಗದಿತ ಅವಧಿಯ ಒಳಗಾಗಿ ತಮ್ಮ ಅರ್ಜಿಯನ್ನು ಸಲ್ಲಿಸಿ ಶುಲ್ಕ ಪಾವತಿಯನ್ನು ಪೂರ್ಣಗೊಳಿಸಬೇಕು ಎಂದು ಹೆಚ್. ಪ್ರಸನ್ನ ಅವರು ಸಲಹೆ ನೀಡಿದ್ದಾರೆ. ಜುಲೈ 8ರ ಸಂಜೆ 4 ಗಂಟೆಯ ನಂತರ ಯಾವುದೇ ಕಾರಣಕ್ಕೂ ಲಿಂಕ್ ಸಕ್ರಿಯವಾಗಿರುವುದಿಲ್ಲ ಮತ್ತು ಮತ್ತೊಮ್ಮೆ ಅವಧಿ ವಿಸ್ತರಣೆ ಮಾಡುವ ಸಾಧ್ಯತೆ ಇರುವುದಿಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್