ಪ್ರಿಯಾಂಕ್ ಖರ್ಗೆ  
ರಾಜ್ಯ

ರಾಮ ಮಂದಿರ BJP-RSSಗೆ ಎಂದಿಗೂ ಭಕ್ತಿಯ ಸಂಕೇತವಾಗಿರಲಿಲ್ಲ; ಅಧಿಕಾರ ಮತ್ತು ಹಣ ಗಳಿಸುವ ಸಾಧನವಾಗಿತ್ತು: ಪ್ರಿಯಾಂಕ್ ಖರ್ಗೆ

ರಾಮ ಮಂದಿರದ ವಿವಾದದ ಬಗ್ಗೆ ಜನರು ಇಷ್ಟು ದಿನಗಳಿಂದ ವ್ಯಕ್ತಪಡಿಸುತ್ತಿದ್ದ ಅನುಮಾನಗಳಿಗೆ ಈಗ ಮತ್ತಷ್ಟು ಬಲ ಸಿಕ್ಕಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ರಾಮ ಮಂದಿರ ಎಂದಿಗೂ ಭಕ್ತಿಯ ಸಂಕೇತವಾಗಿರಲಿಲ್ಲ. ಅದು ಕೇವಲ ಅಧಿಕಾರ ಮತ್ತು ಹಣ ಗಳಿಸುವ ಯಂತ್ರವಾಗಿತ್ತು.

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪದ ನಡುವೆಯೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಮ ಮಂದಿರವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಎಂದಿಗೂ ಭಕ್ತಿಯ ಸಂಕೇತವಾಗಿರಲಿಲ್ಲ. ಅದು ಕೇವಲ ರಾಜಕೀಯ ಅಧಿಕಾರ ಮತ್ತು ಹಣ ಗಳಿಸುವ ಸಾಧನವಾಗಿತ್ತು ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ತಮ್ಮ ಸಂಪೂರ್ಣ ರಾಜಕೀಯ ಅಸ್ತಿತ್ವವನ್ನೇ ರಾಮ ಮಂದಿರದ ವಿಚಾರದ ಮೇಲೆ ಕಟ್ಟಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ರಾಮ ಮಂದಿರದ ಹೆಸರಿನಲ್ಲಿ ಸಂಗ್ರಹಿಸಲಾದ ದೇಣಿಗೆ ದುರ್ಬಳಕೆ ಪ್ರಕರಣವನ್ನು ಉಲ್ಲೇಖಿಸಿರುವ ಅವರು, ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ರಕ್ಷಿಸುತ್ತಿವೆ ಎಂದು ಆರೋಪಿಸಿದ್ದಾರೆ.

ರಾಮ ಮಂದಿರದ ವಿವಾದದ ಬಗ್ಗೆ ಜನರು ಇಷ್ಟು ದಿನಗಳಿಂದ ವ್ಯಕ್ತಪಡಿಸುತ್ತಿದ್ದ ಅನುಮಾನಗಳಿಗೆ ಈಗ ಮತ್ತಷ್ಟು ಬಲ ಸಿಕ್ಕಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ರಾಮ ಮಂದಿರ ಎಂದಿಗೂ ಭಕ್ತಿಯ ಸಂಕೇತವಾಗಿರಲಿಲ್ಲ. ಅದು ಕೇವಲ ಅಧಿಕಾರ ಮತ್ತು ಹಣ ಗಳಿಸುವ ಯಂತ್ರವಾಗಿತ್ತು.

ರಾಮ ಮಂದಿರದ ಹೆಸರಿನಲ್ಲಿ ನಡೆದಿರುವ ದೇಣಿಗೆ ದುರ್ಬಳಕೆ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಧರ್ಮ ಮತ್ತು ನಂಬಿಕೆಯನ್ನು ರಾಜಕೀಯ ಹಾಗೂ ಆರ್ಥಿಕ ಲಾಭಕ್ಕಾಗಿ ಬಳಸುವುದು ಪ್ರಜಾಪ್ರಭುತ್ವಕ್ಕೆ ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪದ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!