ಬಂಧಿತ ಯುವಕ 
ರಾಜ್ಯ

ನಕಲಿ ಗನ್ ಹಿಡಿದು Reels ಮಾಡಿ ಪೋಸ್ಟ್: ಮೂವರು ಯುವಕರ ಬಂಧನ

ಶುಕ್ರವಾರ ಸಂಜೆ ಬಳ್ಳಾರಿ ನಗರದ ಬಂಡಿಹಟ್ಟಿ ಗ್ರಾಮದ ಎಚ್‌ಎಲ್‌ಸಿ ಕಾಲುವೆ ದಡದಲ್ಲಿ ಈ ವಿಡಿಯೊ ಚಿತ್ರೀಕರಿಸಲಾಗಿತ್ತು. ರೀಲ್ಸ್‌ನಲ್ಲಿ ಯುವಕರು ನಕಲಿ ಡಬಲ್ ಬ್ಯಾರೆಲ್ ಗನ್ ಹಾಗೂ ನಕಲಿ ಪಿಸ್ತೂಲ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಕಂಡುಬಂದಿತ್ತು.

ಬಳ್ಳಾರಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಉದ್ದೇಶದಿಂದ ನಕಲಿ ಬಂದೂಕು ಮತ್ತು ಪಿಸ್ತೂಲ್ ಹಿಡಿದು ರೀಲ್ಸ್ ಮಾಡಿ ಪೋಸ್ಟ್ ಮಾಡಿದ್ದ ಬಳ್ಳಾರಿಯ ಮೂವರು ಯುವಕರನ್ನು ಕೌಲ್ ಬಜಾರ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ರೀತಿಯಲ್ಲಿ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶುಕ್ರವಾರ ಸಂಜೆ ಬಳ್ಳಾರಿ ನಗರದ ಬಂಡಿಹಟ್ಟಿ ಗ್ರಾಮದ ಎಚ್‌ಎಲ್‌ಸಿ ಕಾಲುವೆ ದಡದಲ್ಲಿ ಈ ವಿಡಿಯೊ ಚಿತ್ರೀಕರಿಸಲಾಗಿತ್ತು. ರೀಲ್ಸ್‌ನಲ್ಲಿ ಯುವಕರು ನಕಲಿ ಡಬಲ್ ಬ್ಯಾರೆಲ್ ಗನ್ ಹಾಗೂ ನಕಲಿ ಪಿಸ್ತೂಲ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಕಂಡುಬಂದಿದ್ದು, ಇದರಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇತ್ತು.

ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 135/2026 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ (Arms Act) ಸೆಕ್ಷನ್ 27(1) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)-2023ರ ಸೆಕ್ಷನ್ 351(2) ಮತ್ತು 3(5)ರಡಿ ಕಾನೂನು ಕ್ರಮ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊದಲ್ಲಿ ಬಳಸಿರುವ ನಕಲಿ ಡಬಲ್ ಬ್ಯಾರೆಲ್ ಗನ್ ಮತ್ತು ನಕಲಿ ಪಿಸ್ತೂಲ್ ಅನ್ನು ಇನ್ನೂ ವಶಪಡಿಸಿಕೊಳ್ಳಬೇಕಿದ್ದು, ಅವುಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳು ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ವಿಶೇಷ ನಿಗಾ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುವ ಫೋಟೋ, ವಿಡಿಯೊ, ಸಂದೇಶಗಳು ಹಾಗೂ ಇತರ ಪೋಸ್ಟ್‌ಗಳ ಮೇಲೆ ನಿರಂತರವಾಗಿ ನಿಗಾ ಇಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಯುವಕರಿಗೆ ಎಚ್ಚರಿಕೆ ನೀಡಿರುವ ಪೊಲೀಸರು, ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸುವಂತೆ ಮನವಿ ಮಾಡಿದ್ದಾರೆ. ಕಾನೂನು ಉಲ್ಲಂಘಿಸುವ ಅಥವಾ ಸಾರ್ವಜನಿಕರಲ್ಲಿ ಭಯ, ಆತಂಕ ಉಂಟುಮಾಡುವ ರೀತಿಯ ವಿಡಿಯೊಗಳನ್ನು ತಯಾರಿಸಿ ಹಂಚಿಕೊಳ್ಳಬಾರದು ಎಂದು ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಪಡೆಯುವ ಉದ್ದೇಶದಿಂದ ಅಪಾಯಕಾರಿ ಅಥವಾ ಕಾನೂನುಬಾಹಿರ ಕೃತ್ಯಗಳನ್ನು ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ; ಎಕ್ಸ್‌ಪ್ರೆಸ್‌ವೇ ಬಂದ್, ಸಾವಿರಾರು ಪ್ರಯಾಣಿಕರು ಪರದಾಟ..!

ಇದೆಂಥಾ ಲವ್! ಹಿಂದು ಮಹಿಳೆಯರು ಬೇಕು, ಆದ್ರೆ ಮತಾಂತರ ಯಾಕೆ ಆಗಿಲ್ಲ, ನಟ ಆಮೀರ್ ಖಾನ್ ವಿರುದ್ಧ ಮುಸ್ಲಿಂ ಲೀಡರ್ ಕಿಡಿ, Video

FIFA World Cup 2026: ಸೋಲಿನ ಆಘಾತದೊಂದಿಗೆ ಬ್ರೆಜಿಲ್ ನಿರ್ಗಮನ, ಅಂತಾರಾಷ್ಟ್ರೀಯ ಫುಟ್ ಬಾಲ್ ಗೆ ನೆಯ್ಮಾರ್ ಕಣ್ಣೀರ ವಿದಾಯ! Video

ಪೆಸಿಫಿಕ್ ಮಹಾಸಾಗರದಲ್ಲಿ ಪರಮಾಣು ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆ ನಡೆಸಿದ ಚೀನಾ; ಜಪಾನ್-ನ್ಯೂಜಿಲೆಂಡ್‌ ತೀವ್ರ ಕಳವಳ..!

ಮುಂಬೈನಲ್ಲಿ ಮಳೆ ಅವಾಂತರ: ಮನ್ಖುರ್ದ್'ನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; 6 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ..!