ವೀಲ್ಹಿಂಗ್ ಪುಂಡರು 
ರಾಜ್ಯ

ಬೆಂಗಳೂರು: ಆಂಬ್ಯುಲೆನ್ಸ್ ಗೆ ದಾರಿ ಬಿಡದ ವೀಲ್ಹಿಂಗ್ ಪುಂಡರು; Video ವೈರಲ್, ಸಾರ್ವಜನಿಕರ ಆಕ್ರೋಶ!

ಬೆಳಗಿನ ಜಾವ 2.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಗೋರಗುಂಟೆಪಾಳ್ಯದಿಂದ ಯಶವಂತಪುರದವರೆಗೂ ಬೈಕ್ ಸವಾರರು ಪುಂಡಾಟ ಮೆರೆದಿದ್ದಾರೆ.

ಬೆಂಗಳೂರು: ವೀಲ್ಹಿಂಗ್ ಪುಂಡರು ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ತೊಂದರೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ.

ಬೆಳಗಿನ ಜಾವ 2.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಗೋರಗುಂಟೆಪಾಳ್ಯದಿಂದ ಯಶವಂತಪುರದವರೆಗೂ ಬೈಕ್ ಸವಾರರು ಪುಂಡಾಟ ಮೆರೆದಿದ್ದಾರೆ.

ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದ್ದ ರೋಗಿಯನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್ ಸೈರನ್ ಮೊಳಗಿಸಿಕೊಂಡು ತೆರಳುತಿತ್ತು. ಆದರೆ, ಸೈರನ್ ಕೇಳದಂತೆ ಐದರಿಂದ ಆರು ಬೈಕ್ ಸವಾರರು ರಸ್ತೆ ತುಂಬೆಲ್ಲಾ ವೀಲ್ಹಿಂಗ್ ಪುಂಡಾಟ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಿಂಬದಿ ಸವಾರರಲ್ಲಿ ಯಾರೂ ಹೆಲ್ಮೆಟ್ ಧರಿಸಿಲ್ಲ. ವಿಡಿಯೋದಲ್ಲಿ ರೋಗಿಯು ಆಂಬ್ಯುಲೆನ್ಸ್ ನಲ್ಲಿ ಮಲಗಿರುವುದನ್ನು ಸಹ ತೋರಿಸಲಾಗಿದೆ.

ಜೀವಗಳಿಗೆ ಅಪಾಯವನ್ನುಂಟುಮಾಡುವ ಮತ್ತು ತುರ್ತು ಸೇವೆಗಳಿಗೆ ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಬಳಕೆದಾರರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ