ಬೆಸ್ಕಾಂ ಸಾಂದರ್ಭಿಕ ಚಿತ್ರ 
ರಾಜ್ಯ

ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್!

ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ (Average Bills) ಬಿಲ್ ಗಳನ್ನು ನೀಡಲಾಗುತ್ತದೆ.

ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಆದರೆ ಎಚ್ ಟಿ ಗ್ರಾಹಕರು, 40 HP ಮತ್ತು ಅದಕ್ಕಿಂತ ಹೆಚ್ಚಿನ ಮಂಜೂರಾದ ಲೋಡ್ ಹೊಂದಿರುವ ಲೋ ಟೆನ್ಷನ್ (LT) ಗ್ರಾಹಕರು, ಸೋಲಾರ್ ರೂಫ್ಟಾಪ್ (SRTPV) ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಜುಲೈ ತಿಂಗಳ ಸರಾಸರಿ ಬಿಲ್ ಗಳನ್ನು ಗ್ರಾಹಕರಿಗೆ SMS ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು. ಗೃಹ ಬಳಕೆದಾರರಿಗೆ ಆಗಸ್ಟ್ ತಿಂಗಳಿನಿಂದ ಯಥಾಪ್ರಕಾರ ನಿಯಮಿತ ಮೀಟರ್ ರೀಡಿಂಗ್ ಮತ್ತು ನೈಜ ವಿದ್ಯುತ್ ಬಳಕೆಯ ಆಧಾರದಮೇಲೆ ಬಿಲ್ ನೀಡಲಾಗುವುದು.

ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿನ ವ್ಯತ್ಯಾಸದ ಯೂನಿಟ್ಗಳನ್ನು, ನೈಜ ಮೀಟರ್ ರೀಡಿಂಗ್ ಆರಂಭವಾದ ನಂತರ ಮುಂದಿನ ಬಿಲ್ ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ (Adjust) ಮಾಡಲಾಗುವುದು. ಗ್ರಾಹಕರು ಜುಲೈ ಬಿಲ್ ನ ಪಾವತಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಪಾವತಿ ವಿಧಾನಗಳನ್ನು(ಉಪ ವಿಭಾಗದ ನಗದು ಕೌಂಟರ್ ಗಳು, ಬೆಸ್ಕಾಂ ವೆಬ್ ಸೈಟ್, ಬೆಸ್ಕಾಂ ಮಿತ್ರ ಆಪ್ ಹಾಗೂ ಥರ್ಡ್ ಪಾರ್ಟಿ ಆಪ್) ಬಳಸಿಕೊಳ್ಳಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್