ಹೇಮಾವತಿ ನದಿ 
ರಾಜ್ಯ

ರಾಜ್ಯದ ಹಲವೆಡೆ ಮುಂಗಾರು ಆರ್ಭಟ: KRS- ಹೇಮಾವತಿ ಜಲಾಶಯದ ನೀರಿನ ಮಟ್ಟ ಹೆಚ್ಚಳ; ರೈತರ ಮೊಗದಲ್ಲಿ ಮಂದಹಾಸ!

ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ.

ಹಾಸನ/ಕೊಡಗು: ಪಶ್ಚಿಮ ಘಟ್ಟಗಳು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ತೀವ್ರಗೊಂಡಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ.

ಹಾಸನದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಗಾಳಿಯೊಂದಿಗೆ ನಿರಂತರವಾಗಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ.

ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಆಲಮಟ್ಟಿ ಡ್ಯಾಂಗೆ ಮಹಾರಾಷ್ಟ್ರ ಹಾಗೂ ಘಟ್ಟ ಪ್ರದೇಶದ ಮಳೆಯಿಂದಾಗಿ ಅತಿ ಭಾರಿ ಪ್ರಮಾಣದ ಒಳಹರಿವು ದಾಖಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕಾಗಿರುವುದರಿಂದ ಮಂಡ್ಯದ ಕೃಷ್ಣರಾಜಸಾಗರ ಡ್ಯಾಂ ನೀರಿನ ಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ.

ನಿನ್ನೆ ಬೆಳಗ್ಗೆ 5,734 ಕ್ಯೂಸೆಕ್ ಇದ್ದ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ರೈತರ ಮೊಗದಲ್ಲಿ ಸಂತಸ ತಂದಿದೆ.

124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಸದ್ಯ 81.55 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 49.452 ಟಿಎಂಸಿ ಆಗಿದ್ದು, ಸದ್ಯ 12.485 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಹೆಚ್ಚಾಗುವ ಸಾಧ್ಯತೆಯಿದೆ.

ಕೊಡಗಿನ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯವು ಸಹ ತುಂಬುವ ಹಂತದತ್ತ ಸಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ಸೆಪ್ಟೆಂಬರ್ 11 ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ಸಾಧ್ಯತೆ

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!