ಸಿಎಂ ಡಿಕೆ ಶಿವಕುಮಾರ್  online desk
ರಾಜ್ಯ

ರೈತರ ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ: ಸಿಎಂ ಡಿ.ಕೆ ಶಿವಕುಮಾರ್

ಈ ಹಿಂದೆ ಬೇರೆ ರಾಜ್ಯಗಳು ಮಾಡದೇ ಇದ್ದಾಗಲೂ ನಾವು ಸಾಲ ಮನ್ನಾ ಮಾಡಿದ್ದೇವೆ. ಮನಮೋಹನ್ ಸಿಂಗ್ ಅವರ ಸರ್ಕಾರ ಇದ್ದಾಗಲೂ ಮಾಡಿದ್ದೇವೆ. ಈ ವಿಚಾರವನ್ನು ಪರಿಶೀಲಿಸಲಾಗುವುದು ಎಂದರು.

ಕಲಬುರಗಿ: ರೈತರ ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.‌

ಕಲಬುರಗಿಯಲ್ಲಿ ವಿವಿಧ ಸಂಘಟನೆ ಹಾಗೂ ರೈತರಿಂದ ಮನವಿ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಸರ್ಕಾರದ ಗಮನಕ್ಕಿದೆ. ಹೀಗಾಗಿ ಯಾವ ಸಾಲ ಮನ್ನಾ ಮಾಡಬೇಕು ಹಾಗೂ ಹೇಗೆ ಮಾಡಬೇಕೆಂಬುದನ್ನು ಪರಾಮರ್ಶಿಸಲಾಗುವುದು ಎಂದರು.

ರಾಜ್ಯದ ಬರ ಪರಿಸ್ಥಿತಿ ಅರಿಯಲು ಪ್ರವಾಸ ಕೈಗೊಳ್ಳಲಾಗಿದೆ. ಈಗ ಬೆಳಗಾವಿಗೆ ತೆರಳಿ ಅಲ್ಲೂ ಕೂಡಾ ವಾಸ್ತವ ಅರಿಯಲಾಗುವುದು. ಪ್ರವಾಸದ ನಂತರ ಸಂಬಂಧ ಪಟ್ಟವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಸಾಲಮನ್ನಾ ಅಷ್ಟು ಸುಲಭದ ಕೆಲಸವಲ್ಲ.

ಆದರೆ, ಈ ಹಿಂದೆ ಬೇರೆ ರಾಜ್ಯಗಳು ಮಾಡದೇ ಇದ್ದಾಗಲೂ ನಾವು ಸಾಲ ಮನ್ನಾ ಮಾಡಿದ್ದೇವೆ. ಮನಮೋಹನ್ ಸಿಂಗ್ ಅವರ ಸರ್ಕಾರ ಇದ್ದಾಗಲೂ ಮಾಡಿದ್ದೇವೆ. ಈ ವಿಚಾರವನ್ನು ಪರಿಶೀಲಿಸಲಾಗುವುದು ಎಂದರು.

ಬಳಿಕ ಮುಖ್ಯಮಂತ್ರಿ ಸುಮಾರು ಮೂರೂವರೆ ಗಂಟೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿನ ಬರ ಪರಿಸ್ಥಿತಿ ಅವಲೋಕನಾ ಸಭೆ ನಡೆಸಿದರು. ರಾಜ್ಯದಲ್ಲಿ ಬರದ ಛಾಯೆಯಿದ್ದು, ಜನಾಭಿಪ್ರಾಯ ಹಾಗೂ ತಜ್ಞರ ವರದಿ ಆಧರಿಸಿ ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಬರ ಪೀಡಿತ ಪ್ರದೇಶಗಳ ಘೋಷಣೆಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಸಾರ್ವಜನಿಕರ, ರೈತರ ಸಮಸ್ಯೆ ಅರಿಯಲು ಪ್ರಜಾಸೇವೆ ರಚಿಸಲಾಗಿದ್ದು, ಶೀಘ್ರ ಸಚಿವರನ್ನು ನೇಮಕ ಮಾಡಲಾಗುವುದು. ಅದರಡಿಯೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ ಪುನರುಚ್ಚರಿಸಿದರು.‌

ಡಿಸಿಎಂ ಡಾ. ಜಿ. ಪರಮೇಶ್ವರ, ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್, ಪ್ರಿಯಾಂಕ್ ಖರ್ಗೆ, ವಿ. ಮುನಿಯಪ್ಪ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ ಸಿಂಗ್ ಸೇರಿದಂತೆ ‌ಮುಂತಾದವರಿದ್ದರು.‌

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!