ಬೆಂಗಳೂರಿನ ತಿಮ್ಮಯ್ಯ ರಸ್ತೆಯಲ್ಲಿ ನಿಲ್ಲಿಸಿರುವ ಆಟೋರಿಕ್ಷಾ. 
ರಾಜ್ಯ

ಬೆಂಗಳೂರಿಗರೇ ಗಮನಿಸಿ! Footpath ಮೇಲೆ ನಿಲ್ಲಿಸಿದ ವಾಹನ ಜಪ್ತಿಗೆ GBA ಮುಂದು, ನಾಳೆಯಿಂದಲೇ ಕಠಿಣ ನಿಯಮ ಜಾರಿ..!

ಇತ್ತೀಚೆಗೆ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸುವ ಉದ್ದೇಶದಿಂದ ಕೈಗೊಂಡಿದ್ದ 'ಸೇಫ್ ಫುಟ್‌ಪಾತ್ ಕ್ಯಾಂಪೇನ್' ಜುಲೈ 10ಕ್ಕೆ ಅಂತ್ಯಗೊಳ್ಳಲಿದ್ದು, ಅದರ ಬೆನ್ನಲ್ಲೇ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಆರಂಭವಾಗುತ್ತಿದೆ.

ಬೆಂಗಳೂರು: ಸಾರ್ವಜನಿಕ ರಸ್ತೆ, ಖಾಲಿ ಜಾಗ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಲವು ದಿನಗಳಿಂದ ಬಿಟ್ಟುಹೋಗಿರುವ ಅನಾಥ ವಾಹನಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಜುಲೈ 10ರಿಂದ ನಗರಾದ್ಯಂತ ವಿಶೇಷ ಕಾರ್ಯಾಚರಣೆ ಆರಂಭಿಸುತ್ತಿದೆ.

ಬೆಂಗಳೂರು ಸಂಚಾರ ಪೊಲೀಸರ ಸಹಯೋಗದಲ್ಲಿ ಐದು ನಗರ ನಿಗಮಗಳು ಈ ಕಾರ್ಯಾಚರಣೆಯನ್ನು ನಡೆಸಲಿದ್ದು, ಗುರುತಿಸಲಾದ ವಾಹನಗಳಿಗೆ ನೋಟಿಸ್ ನೀಡಿ, ಬಳಿಕ ಅವುಗಳನ್ನು ವಶಕ್ಕೆ ಪಡೆದು ಹರಾಜು ಪ್ರಕ್ರಿಯೆ ನಡೆಸಲಾಗುತ್ತದೆ.

ಜಿಬಿಎ ಕಾಯ್ದೆ-2024ರ ಸೆಕ್ಷನ್ 324ರ ಅಡಿಯಲ್ಲಿ ಈ ಕಾರ್ಯಾಚರಣೆ ನಡೆಯಲಿದ್ದು, ಜುಲೈ 8ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.

ಇತ್ತೀಚೆಗೆ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸುವ ಉದ್ದೇಶದಿಂದ ಕೈಗೊಂಡಿದ್ದ 'ಸೇಫ್ ಫುಟ್‌ಪಾತ್ ಕ್ಯಾಂಪೇನ್' ಜುಲೈ 10ಕ್ಕೆ ಅಂತ್ಯಗೊಳ್ಳಲಿದ್ದು, ಅದರ ಬೆನ್ನಲ್ಲೇ ಅನಾಥ ವಾಹನಗಳ ತೆರವು ಕಾರ್ಯಾಚರಣೆ ಆರಂಭವಾಗುತ್ತಿದೆ.

ಜಿಬಿಎ ಅಧಿಕಾರಿಗಳ ಮಾತನಾಡಿ, ಮೊದಲಿಗೆ ಹಲವು ದಿನಗಳಿಂದ ರಸ್ತೆ, ಖಾಲಿ ಜಾಗ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿ ಯಾರೂ ಬಳಸದ ವಾಹನಗಳನ್ನು ಗುರುತಿಸಲಾಗುತ್ತದೆ. ನಂತರ ವಾಹನಗಳ ಮೇಲೆ ಸ್ಟಿಕ್ಕರ್ ಅಂಟಿಸಿ, ಮಾಲೀಕರಿಗೆ 7 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ನೋಟಿಸ್ ಅಂಟಿಸುವ ವೇಳೆ ವಾಹನಕ್ಕೆ ವೀಲ್ ಕ್ಲ್ಯಾಂಪ್ ಅಳವಡಿಸಲಾಗುತ್ತದೆ. ಏಳು ದಿನಗಳೊಳಗೆ ವಾಹನವನ್ನು ತೆರವುಗೊಳಿಸದಿದ್ದರೆ, ಜಿಬಿಎ ಹಾಗೂ ಸಂಚಾರ ಪೊಲೀಸರು ಜಂಟಿಯಾಗಿ ವಾಹನವನ್ನು ಟೋಯಿಂಗ್ ಮಾಡಿ ವಶಕ್ಕೆ ಪಡೆಯಲಿದ್ದಾರೆ.

ನಂತರ ನ್ಯಾಯಾಲಯದ ಅನುಮತಿ ಪಡೆದು ವಾಹನಗಳನ್ನು ಸಾರ್ವಜನಿಕ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತದೆ. ಹರಾಜಿನ ಬಳಿಕ ವಾಹನಗಳ ಮೇಲೆ ಯಾವುದೇ ಹಕ್ಕು ಮಂಡಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

ಈಗಾಗಲೇ 1,518 ವಾಹನಗಳ ಗುರುತು

ಕಾರ್ಯಾಚರಣೆಗೆ ಮುನ್ನವೇ ಬೆಂಗಳೂರು ಸಂಚಾರ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ 1,518 ಅನಾಥ ವಾಹನಗಳನ್ನು ಗುರುತಿಸಿದ್ದಾರೆ. ಇದರಲ್ಲಿ ಬೆಂಗಳೂರು ಕೇಂದ್ರ ನಗರ ನಿಗಮ ವ್ಯಾಪ್ತಿಯಲ್ಲೇ 403 ವಾಹನಗಳು ಪತ್ತೆಯಾಗಿವೆ.

ಈ ವಾಹನಗಳ ಮಾಲೀಕರನ್ನು ಸಂಪರ್ಕಿಸಿ, ಜುಲೈ 10ರೊಳಗೆ ವಾಹನ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಈಗಲೇ ವಾಹನ ತೆರವುಗೊಳಿಸಿದರೆ ನೋ-ಪಾರ್ಕಿಂಗ್ ದಂಡ ಮಾತ್ರ ವಿಧಿಸಲಾಗುತ್ತದೆ. ಆದರೆ, ವಾಹನವನ್ನು ಟೋಯಿಂಗ್ ಮಾಡಿದ ಬಳಿಕ ಮಾಲೀಕರು ಟೋಯಿಂಗ್ ಶುಲ್ಕ ಹಾಗೂ ಇತರೆ ದಂಡಗಳನ್ನು ಪಾವತಿಸಿ ವಾಹನವನ್ನು ವಾಪಸ್ ಪಡೆಯಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರ ಸಹಕಾರಕ್ಕೂ ಜಿಬಿಎ ಕರೆ

ಈ ಕಾರ್ಯಾಚರಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವವನ್ನೂ ಜಿಬಿಎ ಕೋರಿದೆ. ತಮ್ಮ ಪ್ರದೇಶದಲ್ಲಿ ಹಲವು ದಿನಗಳಿಂದ ಬಿಟ್ಟುಹೋಗಿರುವ ವಾಹನಗಳ ಮಾಹಿತಿ ಇದ್ದರೆ, ಬೆಂಗಳೂರು ಟ್ರಾಫಿಕ್ ಪೊಲೀಸರ 'BTP-ASTraM' ಆ್ಯಪ್‌ನ 'Public Eye' ಸೌಲಭ್ಯದ ಮೂಲಕ ದೂರು ಸಲ್ಲಿಸಬಹುದು ಎಂದು ತಿಳಿಸಿದೆ.

ಸಂಚಾರ ವಿಭಾಗದ ಡಿಸಿಪಿ ಗೋಪಾಲ್ ಎಂ. ಬ್ಯಾಕೋಡ್ ಅವರು ಮಾತನಾಡಿ, ಈಗಾಗಲೇ ಗುರುತಿಸಿರುವ ವಾಹನಗಳ ಛಾಯಾಚಿತ್ರ ಹಾಗೂ ಜಿಪಿಎಸ್ ಸ್ಥಳ ಮಾಹಿತಿಯನ್ನು ಜಿಬಿಎ ಅಧಿಕಾರಿಗಳಿಗೆ ಹಂಚಿಕೊಳ್ಳಲಾಗಿದೆ. ಇದರಿಂದ ಕಾರ್ಯಾಚರಣೆಯನ್ನು ವೇಗವಾಗಿ ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜತಾಂತ್ರಿಕತೆಗಿಂತ ದೊಡ್ಡ ಆಯುಧವಿಲ್ಲ, ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಕ್ಕೆ ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ: ಪ್ರಧಾನಿ ಮೋದಿ

Hormuz ಉದ್ವಿಗ್ನತೆ ತೀವ್ರ: Chabahar port ಗುರಿಯಾಗಿಸಿ ಅಮೆರಿಕಾ ಭೀಕರ ದಾಳಿ, Iranಗೆ ಮತ್ತೊಂದು ಪ್ರಬಲ ಹೊಡೆತ..!

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ; ದೆಹಲಿ ಜಲಾವೃತ, ಜನಜೀವನ ಅಸ್ತವ್ಯಸ್ತ, Red ಅಲರ್ಟ್ ಘೋಷಣೆ..!

ಮುರಿದುಬಿದ್ದ ಶಾಂತಿ ಒಪ್ಪಂದ: ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ; ಮೂರು ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಪ್ರತಿದಾಳಿ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ಮದುವೆ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ: ಭೀಕರ ತಿರುವು, ತಿರುಪತಿಯಲ್ಲಿ ಡಬಲ್ ಮರ್ಡರ್