ಹೈಕೋರ್ಟ್  
ರಾಜ್ಯ

GBA ವ್ಯಾಪ್ತಿಯಲ್ಲಿ ಪ್ರತ್ಯೇಕ SIR: ರಾಜ್ಯ ಸರ್ಕಾರ, SEC, ECIಗೆ ಹೈಕೋರ್ಟ್ ನೋಟಿಸ್

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳು ಜುಲೈ 15ರೊಳಗೆ ಆಕ್ಷೇಪಣೆಗಳ ಹೇಳಿಕೆ ಸಲ್ಲಿಸಬೇಕು ಎಂದು ಸೂಚಿಸಿ ನೋಟಿಸ್ ನೀಡಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ರಾಜ್ಯ ಚುನಾವಣಾ ಆಯೋಗ (SEC) ನಡೆಸುತ್ತಿರುವ ಪ್ರತ್ಯೇಕ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ (SEC) ಹಾಗೂ ಭಾರತದ ಚುನಾವಣಾ ಆಯೋಗಕ್ಕೆ (ECI) ನೋಟಿಸ್ ಜಾರಿಗೊಳಿಸಿದೆ.

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳು ಜುಲೈ 15ರೊಳಗೆ ಆಕ್ಷೇಪಣೆಗಳ ಹೇಳಿಕೆ ಸಲ್ಲಿಸಬೇಕು ಎಂದು ಸೂಚಿಸಿ ನೋಟಿಸ್ ನೀಡಿದೆ.

ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರಾದ ವಿವೇಕ್ ಎಂ., ಶ್ರೀನಾಥ್ ಎಂ., ಟಿ. ಮಂಜುನಾಥ, ಸತೀಶ್ ಟಿ.ಆರ್. ಹಾಗೂ ಆನಂದಮೂರ್ತಿ ಕೆ.ಆರ್. ಅವರು ಈ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ, ಜೂನ್ 19ರಂದು ಹೊರಡಿಸಿದ ಆದೇಶದ ಆಧಾರದಲ್ಲಿ ರಾಜ್ಯ ಚುನಾವಣಾ ಆಯೋಗವು ಪ್ರತ್ಯೇಕ SIR ನಡೆಸಲು ಯಾವುದೇ ಕಾನೂನುಬದ್ಧ ಅಧಿಕಾರ ಹೊಂದಿಲ್ಲ ಎಂದು ವಾದಿಸಲಾಗಿದೆ.

ಭಾರತದ ಚುನಾವಣಾ ಆಯೋಗ ಈಗಾಗಲೇ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಿಸಿದ್ದು, ಕರ್ನಾಟಕವನ್ನು ಅದರ ಮೂರನೇ ಹಂತದಲ್ಲಿ ಸೇರಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಜೂನ್ 16ರಂದು ಚುನಾವಣಾ ಆಯೋಗವು ಕರ್ನಾಟಕದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಸ್ಥಿರಗೊಳಿಸಿದ್ದು (Freeze), ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವಂತೆ ವೇಳಾಪಟ್ಟಿಯನ್ನೂ ಪ್ರಕಟಿಸಿದೆ ಎಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಈ ಹಿನ್ನೆಲೆಯಲ್ಲಿ, ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ SIR ನಡೆಸುತ್ತಿರುವ ಕ್ರಮವನ್ನು ರದ್ದುಪಡಿಸುವಂತೆ ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!