ಪ್ರಿಯಾಂಕ್ ಖರ್ಗೆ  
ರಾಜ್ಯ

RSS ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಅಗತ್ಯವಿಲ್ಲ; ಮೆರವಣಿಗೆ ನಡೆಸಿದರೆ ಮಾತ್ರ ಅನುಮತಿ ಕಡ್ಡಾಯ: ಸಚಿವ ಪ್ರಿಯಾಂಕ್ ಖರ್ಗೆ

ಖಾಸಗಿ ಕಾರ್ಯಕ್ರಮವಾಗಿರುವುದರಿಂದ ಸರ್ಕಾರದ ಅನುಮತಿ ಬೇಕಾಗುವುದಿಲ್ಲ. ಆದರೆ, ಸಾರ್ವಜನಿಕ ರಸ್ತೆಯಲ್ಲಿ ಮೆರವಣಿಗೆ ಅಥವಾ ಬೃಹತ್ ಸಾರ್ವಜನಿಕ ಸಮಾವೇಶ ಆಯೋಜಿಸಲು ಬಯಸಿದರೆ ಸ್ಥಳೀಯ ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು.

ಬೆಂಗಳೂರು: ಬೆಳಗಾವಿಯಲ್ಲಿ ಜುಲೈ 10ರಿಂದ ಆರಂಭವಾಗಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್‌ಗೆ ಸರ್ಕಾರದ ಅನುಮತಿ ಅಗತ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್‌ ಖಾಸಗಿ ಕಾರ್ಯಕ್ರಮವಾಗಿರುವುದರಿಂದ ಸರ್ಕಾರದ ಅನುಮತಿ ಬೇಕಾಗುವುದಿಲ್ಲ. ಆದರೆ, ಸಾರ್ವಜನಿಕ ರಸ್ತೆಯಲ್ಲಿ ಮೆರವಣಿಗೆ ಅಥವಾ ಬೃಹತ್ ಸಾರ್ವಜನಿಕ ಸಮಾವೇಶ ಆಯೋಜಿಸಲು ಬಯಸಿದರೆ ಸ್ಥಳೀಯ ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾಡಿರುವ ಆರೋಪಕ್ಕೂ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಹಿಂದೂ ಕಾರ್ಯಕರ್ತ ತೇಜಸ್ ಗೌಡ ಅವರು ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಹಿನ್ನೆಲೆಯಲ್ಲಿ, ಅವರನ್ನು ಬೆದರಿಸಲು ಪೊಲೀಸರು ಮನೆಗೆ ಹೋಗಿದ್ದರು ಎಂದು ಸಿ.ಟಿ. ರವಿ ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, "ಸಿ.ಟಿ. ರವಿ ಮೊದಲು ನನ್ನ ವಿರುದ್ಧ ದೂರು ದಾಖಲಿಸಲಿ. ನಂತರ ಮಾತನಾಡಲಿ. ಮೊದಲು ಅವರು ತಮ್ಮ ಧ್ವನಿ ಮಾದರಿಯನ್ನು ನೀಡಬೇಕು" ಎಂದು ವ್ಯಂಗ್ಯವಾಡಿದರು.

ಬೆಳಗಾವಿ ವಿಧಾನಮಂಡಲ ಅಧಿವೇಶನದ ವೇಳೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಧ್ವನಿ ಮಾದರಿ ನೀಡುವ ವಿಚಾರವನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದರು.

ಇತ್ತೀಚೆಗೆ ಆರ್‌ಎಸ್‌ಎಸ್ ಕುರಿತು ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗಳ ವಿರುದ್ಧ ಹಿಂದೂ ಕಾರ್ಯಕರ್ತ ತೇಜಸ್ ಗೌಡ ಮಾನನಷ್ಟ ದಾವೆ ಹೂಡಿದ್ದು, ಈ ಸಂಬಂಧ ಬೆಂಗಳೂರಿನ ನ್ಯಾಯಾಲಯ ಪ್ರಿಯಾಂಕ್ ಖರ್ಗೆ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ನೇತೃತ್ವದ ಎನ್‌ಡಿಎ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, "ಇದು ಬಿಜೆಪಿಯ ಎಂದಿನ ತಂತ್ರ. ಮೊದಲು ಗದ್ದಲ ಮಾಡುತ್ತಾರೆ, ತಾವು ಸಂತ್ರಸ್ತರು ಎಂದು ಬಿಂಬಿಸಿಕೊಳ್ಳುತ್ತಾರೆ. ನಂತರ ಕೇಂದ್ರದ ತನಿಖಾ ಸಂಸ್ಥೆಗಳು ಬರುತ್ತವೆ. ಇದರಿಂದ ಆ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಗಳಂತೆ ಕೆಲಸ ಮಾಡುತ್ತಿವೆ ಎಂಬ ಭಾವನೆ ಮೂಡುತ್ತದೆ" ಎಂದು ಆರೋಪಿಸಿದರು.

ಜುಲೈ 10ರಿಂದ 12ರವರೆಗೆ ಬೆಳಗಾವಿಯಲ್ಲಿ ಆರ್‌ಎಸ್‌ಎಸ್‌ನ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ನಡೆಯಲಿದ್ದು, ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!