ಪೆಟ್ರೋಲ್ ಟ್ಯಾಂಕರ್ ಲಾರಿ ಹೊತ್ತಿ ಉರಿಯುತ್ತಿರುವುದು  
ರಾಜ್ಯ

ದೊಡ್ಡಬಳ್ಳಾಪುರ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್; ಹಾಲಿನ ಲಾರಿಯೂ ಬೆಂಕಿಗಾಹುತಿ

ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದೆ. ಕ್ಷಣಾರ್ಧದಲ್ಲಿ ಲಾರಿ ಹೊತ್ತಿ ಉರಿದಿದ್ದು, ಚಾಲಕರು ಸಮಯಕ್ಕೆ ಸರಿಯಾಗಿ ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ, ಸಮೀಪದಲ್ಲಿದ್ದ ಮತ್ತೊಂದು ಲಾರಿಗೂ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ.

ಈ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ 11ನೇ ಮೈಲಿ ಸಮೀಪ ಸಂಭವಿಸಿದೆ. ಪೆಟ್ರೋಲ್ ಟ್ಯಾಂಕರ್ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಟ್ಯಾಂಕರ್‌ಗೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ವೇಗವಾಗಿ ವ್ಯಾಪಿಸಿ, ಅದೇ ವೇಳೆ ಸಮೀಪದಲ್ಲಿ ರಿವರ್ಸ್ ಮಾಡುತ್ತಿದ್ದ ಹಾಲಿನ ಲಾರಿಗೂ ಹರಡಿದೆ. ಕೆಲವೇ ಕ್ಷಣಗಳಲ್ಲಿ ಎರಡೂ ವಾಹನಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿವೆ.

ಆದರೆ, ಬೆಂಕಿ ಕಾಣಿಸಿಕೊಂಡ ತಕ್ಷಣವೇ ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಲಾರಿಯ ಚಾಲಕರು ವಾಹನಗಳಿಂದ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಅಪಘಾತ ಹಾಗೂ ಬೆಂಕಿಯಿಂದಾಗಿ ಆ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED