ಬಂಧಿತ ಆರೋಪಿಗಳು 
ರಾಜ್ಯ

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ಪ್ರಾಥಮಿಕ ತನಿಖೆಯಲ್ಲಿ, ಈ ಕಾರ್ಮಿಕರು, ಸುಮಾರು ಮೂರು ತಿಂಗಳ ಹಿಂದೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ವಲಯದ ಮೂಲಕ ಪಾಸ್‌ಪೋರ್ಟ್ ಅಥವಾ ವೀಸಾಗಳಿಲ್ಲದೆ ಭಾರತವನ್ನು ಪ್ರವೇಶಿಸಿದ್ದಾರೆ.

ಮಂಗಳೂರು: ಪಶ್ಚಿಮ ಬಂಗಾಳದಲ್ಲಿದ್ದ ಬಾಂಗ್ಲಾದೇಶದ ಹಲವು ಪ್ರಜೆಗಳು ರಾಜ್ಯಕ್ಕೆ ಬಂದಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಗಳ ಬೆನ್ನಲ್ಲೇ "ಅಕ್ರಮವಾಗಿ" ಭಾರತ ಪ್ರವೇಶಿಸಿ ಮಂಗಳೂರಿನಲ್ಲಿ ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಎಂಟು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಪೊಲೀಸರು ಜುಲೈ 9 ರಂದು ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದಲ್ಲಿರುವ ಕಟ್ಟಡವನ್ನು ಶೋಧಿಸಿ 54 ನಿರ್ಮಾಣ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಿದ ವೇಳೆ 8 ಬಾಂಗ್ಲಾದೇಶಿಯರು ಪತ್ತೆಯಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ.

ತಪಾಸಣೆಯ ಸಮಯದಲ್ಲಿ, ಬಾಂಗ್ಲಾದೇಶದ ಎಂಟು ಕಾರ್ಮಿಕರು ಮಾನ್ಯ ಪ್ರಯಾಣ ದಾಖಲೆಗಳಿಲ್ಲದೆ ದೇಶದಲ್ಲಿ ವಾಸಿಸುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಈ ಕಾರ್ಮಿಕರು, ಸುಮಾರು ಮೂರು ತಿಂಗಳ ಹಿಂದೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ವಲಯದ ಮೂಲಕ ಪಾಸ್‌ಪೋರ್ಟ್ ಅಥವಾ ವೀಸಾಗಳಿಲ್ಲದೆ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ತಿಳಿದುಬಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕಾರ್ಮಿಕರು ಕಳೆದ ಎರಡು ತಿಂಗಳಿನಿಂದ ಸುರತ್ಕಲ್ ಬಳಿಯ ಮುಕ್ಕದಲ್ಲಿರುವ ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಕಾರ್ಮಿಕರು ಬಾಂಗ್ಲಾದೇಶದ ರಾಷ್ಟ್ರೀಯ ಗುರುತಿನ ಚೀಟಿಗಳು, ಜನನ ಪ್ರಮಾಣಪತ್ರಗಳು ಮತ್ತು ಕುಟುಂಬ ದಾಖಲೆಗಳನ್ನು ತೋರಿಸಿದರು. ಇದು ಅವರ ಬಾಂಗ್ಲಾದೇಶದ ರಾಷ್ಟ್ರೀಯತೆಯನ್ನು ದೃಢಪಡಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧನದ ನಂತರ ಅವರನ್ನು ಗಡಿಪಾರು ಮಾಡಲು ಮುಂದಿನ ಕಾನೂನು ಕ್ರಮಗಳ ಕುರಿತು ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಮಿಕರ ಅಕ್ರಮ ಪ್ರವೇಶಕ್ಕೆ ಅನುಕೂಲ ಮಾಡಿಕೊಟ್ಟವರು ಮತ್ತು ಅವರಿಗೆ ಉದ್ಯೋಗ ವ್ಯವಸ್ಥೆ ಮಾಡಿದವರನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್