ನಮ್ಮ ಮೆಟ್ರೊ ನಿಲ್ದಾಣ  
ರಾಜ್ಯ

Namma Metro: 20 ದಿನಗಳಲ್ಲಿ 3ನೇ ಬಾರಿಗೆ ತಾಂತ್ರಿಕ ದೋಷ; ಪೀಕ್ ಅವರ್‌ನಲ್ಲಿ ಪ್ರಯಾಣಿಕರ ಪರದಾಟ..!

ತಕ್ಷಣವೇ ರೈಲಿನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ, ಇತರ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು. ಬಳಿಕ ದೋಷ ಪತ್ತೆಹಚ್ಚಲು ಸಂಬಂಧಿತ ರೈಲನ್ನು ಹಳಿಯಿಂದ ತೆರವುಗೊಳಿಸಿ ಪರಿಶೀಲನೆ ನಡೆಸಲಾಯಿತು.

ಬೆಂಗಳೂರು: ಕಳೆದ 20 ದಿನಗಳಲ್ಲೇ ಮೂರನೇ ಬಾರಿ ನಮ್ಮ ಮೆಟ್ರೋದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಗುರುವಾರ ಬೆಳಗ್ಗೆ ಪೀಕ್ ಅವರ್‌ನಲ್ಲಿ ಹಸಿರು ಮಾರ್ಗ (ಗ್ರೀನ್ ಲೈನ್) ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 8.23ರ ಸುಮಾರಿಗೆ ಬನಶಂಕರಿ ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಸಿಗ್ನಲಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ರೈಲು ಮುಂದೆ ಚಲಿಸಲು ಸಾಧ್ಯವಾಗಲಿಲ್ಲ. ಇದರಿಂದ ಗ್ರೀನ್ ಲೈನ್‌ನ ಸಂಪೂರ್ಣ ಮಾರ್ಗದಲ್ಲಿ ರೈಲು ಸಂಚಾರ ವಿಳಂಬವಾಯಿತು.

ತಕ್ಷಣವೇ ರೈಲಿನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ, ಇತರ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು. ಬಳಿಕ ದೋಷ ಪತ್ತೆಹಚ್ಚಲು ಸಂಬಂಧಿತ ರೈಲನ್ನು ಹಳಿಯಿಂದ ತೆರವುಗೊಳಿಸಿ ಪರಿಶೀಲನೆ ನಡೆಸಲಾಯಿತು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ತಾಂತ್ರಿಕ ದೋಷದಿಂದಾಗಿ ಬೆಳಗ್ಗೆ 8.23ರಿಂದ 8.38ರವರೆಗೆ ಗ್ರೀನ್ ಲೈನ್ ಸೇವೆಗೆ ನೇರ ಪರಿಣಾಮ ಬೀರಿತು. ಸುರಕ್ಷತಾ ದೃಷ್ಟಿಯಿಂದ ರೈಲುಗಳನ್ನು ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ಓಡಿಸಲಾಯಿತು. ಇದರಿಂದ ಬೆಳಗ್ಗೆ 10.30ರವರೆಗೆ ರೈಲು ಸಂಚಾರದಲ್ಲಿ ವಿಳಂಬ ಉಂಟಾಯಿತು. ನಂತರ ವೇಳಾಪಟ್ಟಿಯಂತೆ ಮೆಟ್ರೋ ಸೇವೆ ಸಹಜ ಸ್ಥಿತಿಗೆ ಮರಳಿತು.

ಕಳೆದ ಕೆಲವು ದಿನಗಳಿಂದ ನಮ್ಮ ಮೆಟ್ರೋದಲ್ಲಿ ಪದೇ ಪದೇ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಜೂನ್ 23ರಂದು ಪರ್ಪಲ್ ಲೈನ್‌ನ ಭೂಗತ ಮಾರ್ಗದಲ್ಲಿ ಥರ್ಡ್ ರೈಲು (Third Rail) ಜೋಡಣೆ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಸುಮಾರು ಐದು ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಂಡಿತ್ತು. ಸಂಜೆ ಪೀಕ್ ಅವರ್‌ನಲ್ಲಿ ಸಂಭವಿಸಿದ ಈ ಘಟನೆ ಸಾವಿರಾರು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು.

ಇದಾದ ಎರಡು ದಿನಗಳ ಬಳಿಕ, ಜೂನ್ 25ರಂದು ಮೆಟ್ರೋ ರೈಲಿನ ಬಾಗಿಲುಗಳು ಸರಿಯಾಗಿ ಮುಚ್ಚದ ತಾಂತ್ರಿಕ ದೋಷದಿಂದ ಸುಮಾರು 20 ನಿಮಿಷಗಳ ಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಇದೀಗ ಬನಶಂಕರಿ ನಿಲ್ದಾಣದಲ್ಲಿ ಸಂಭವಿಸಿರುವ ಸಿಗ್ನಲಿಂಗ್ ದೋಷವು ಕಳೆದ 20 ದಿನಗಳಲ್ಲಿ ಸಂಭವಿಸಿದ ಮೂರನೇ ತಾಂತ್ರಿಕ ಸಮಸ್ಯೆಯಾಗಿದ್ದು, ಇದು ಮೆಟ್ರೋ ನಿರ್ವಹಣೆ ಮತ್ತು ತಾಂತ್ರಿಕ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಮತ್ತೆ ಚರ್ಚೆ ಹುಟ್ಟುಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ ಸಜ್ಜಾದ CJP; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

ಬೀದಿ ನಾಯಿಯ ಭೀಕರ ದಾಳಿ: ಮನೆಯಿಂದ ಹೊರಗೆ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಗಂಭೀರ! Video