ರಾಜ್ಯ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

ಇಂದು ರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಅವರ ಇಬ್ಬರು ಪುತ್ರರು ಮೃತಪಟ್ಟಿದ್ದಾರೆ.

ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಅವರ ಇಬ್ಬರು ಪುತ್ರರು ಮೃತಪಟ್ಟಿದ್ದಾರೆ.

ಮೃತರನ್ನು ತಾಯಿ ಸತ್ಯವೇಣಿ(38), ಪುತ್ರರಾದ ಹರಿವೆಂಕಟರಾಮ್(20) ಮತ್ತು ಜಶ್ವಂತ(18) ಎಂದು ಗುರುತಿಸಲಾಗಿದ್ದು, ತಂದೆ ರಾಘವೇಂದ್ರ(41) ಅವರಿಗೆ ಗಂಭೀರ ಗಾಯಗಳಾಗಿವೆ.

ಈ ಕುಟುಂಬವು ಕೊಪ್ಪಳ ಜಿಲ್ಲೆಯ ಕಾರಟಗಿಯಿಂದ ಶಿರಡಿಗೆ ಹೊರಟಿದ್ದರು. 20 ವರ್ಷದ ಮಗ ಹರಿವೆಂಕಟರಾಮ್​​ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನಾ ಸ್ಥಳಕ್ಕೆ ಮನಗೂಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್