ಪ್ರಿಯಾಂಕ್ ಖರ್ಗೆ  
ರಾಜ್ಯ

ಕಾನೂನು ಪ್ರಕಾರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು: ಪ್ರಿಯಾಂಕ್ ಖರ್ಗೆ

ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ರಾಜ್ಯ ಸರ್ಕಾರವು ವಿಚಾರಣೆಗೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳ ಹೆಸರನ್ನು ಆರೋಪಪಟ್ಟಿಯಿಂದ ಕೈಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಅನುಮತಿ (prosecution sanction) ನೀಡುವುದು ಸರ್ಕಾರದ ವಿವೇಚನೆಯಾಗಿದ್ದು, ಸೂಕ್ತ ಕಾರಣಗಳಿದ್ದರೆ ಮಾತ್ರ ಅನುಮತಿ ನೀಡಲಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತನಿಖಾ ಸಂಸ್ಥೆಗಳು ಅಥವಾ ಅಧಿಕಾರಿಗಳು ನೀಡಿರುವ ಮನವಿಯಲ್ಲಿ ಸಮರ್ಥನೀಯ ಮತ್ತು ಮಾನ್ಯವಾದ ಕಾರಣಗಳಿದ್ದರೆ, ಕಾನೂನು ಪ್ರಕಾರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ನಿರ್ಧಾರವನ್ನು ಸರ್ಕಾರವು ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ

ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ರಾಜ್ಯ ಸರ್ಕಾರವು ವಿಚಾರಣೆಗೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳ ಹೆಸರನ್ನು ಆರೋಪಪಟ್ಟಿಯಿಂದ ಕೈಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

ಈ ಘಟನೆ ಆರು ತಿಂಗಳ ಹಿಂದೆ ನಡೆದದ್ದು. ಆರೋಪಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ವೇಳೆ ನಿಗದಿತ ಪ್ರಕ್ರಿಯೆಯನ್ನು ಅನುಸರಿಸಲಾಗಿದೆಯೇ ಎಂಬುದನ್ನು ಪರಿಶೀಲಿಸುತ್ತೇವೆ. ಆರು ತಿಂಗಳ ಹಿಂದೆ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದರೆ, ಅಗತ್ಯ ಕಾನೂನು ಪ್ರಕ್ರಿಯೆ ಪಾಲನೆಯಾಗಿರುತ್ತದೆ ಎಂದು ಖರ್ಗೆ ಹೇಳಿದರು.

ಎಸ್‌ಐಟಿ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್‌ಪಿ) ಶ್ರೀಧರ್ ಕೆ. ಪೂಜಾರ್ ಹಾಗೂ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾಜಿ ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಪ್ರಶಾಂತ್ ಬಾಬು ಡಿ.ಎಂ., ಚಂದ್ರಧರ್ ಎಸ್.ಆರ್. ಮತ್ತು ಲಕ್ಷ್ಮೀಕಾಂತಯ್ಯ ಅವರ ಹೆಸರನ್ನು ಉಲ್ಲೇಖಿಸಲಾಗಿಲ್ಲ.

ಈ ನಾಲ್ವರು ಅಧಿಕಾರಿಗಳನ್ನು ಪ್ರಕರಣದಲ್ಲಿ ಬಂಧಿಸಲಾಗಿದ್ದರೂ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಮತ್ತೆ ಸೇವೆಗೆ ಮರುನೇಮಕ ಮಾಡಲಾಗಿತ್ತು. ಬಂಧನಕ್ಕೂ ಮುನ್ನ ಶ್ರೀಧರ್ ಕೆ. ಪೂಜಾರ್ ಅವರಿಗೆ ಡಿವೈಎಸ್‌ಪಿ ಹುದ್ದೆಗೆ ಬಡ್ತಿ ನೀಡಿ, ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್‌ಡಿ) ನಿಯೋಜಿಸಲಾಗಿತ್ತು.

ಎಸ್‌ಐಟಿ, ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಸೈಬರ್ ಭದ್ರತಾ ಸಂಸ್ಥೆ ಜಿಸಿಐಡಿ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಸಂತೋಷ್ ಕುಮಾರ್ ಕೆ.ಎಸ್. ವಿರುದ್ಧ ಮಾತ್ರ ಆರೋಪಪಟ್ಟಿ ಸಲ್ಲಿಸಿದೆ.

ಪ್ರಕರಣದ ಎಫ್‌ಐಆರ್ ಪ್ರಕಾರ, ಅಂದು ಬೆಂಗಳೂರಿನ ಸಿಸಿಬಿಗೆ ಸೇರಿದ ಈ ನಾಲ್ವರು ಅಧಿಕಾರಿಗಳು ಪ್ರಮುಖ ಆರೋಪಿ ಹಾಗೂ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಅವರನ್ನು ಕಾನೂನುಬಾಹಿರವಾಗಿ ಬಂಧನದಲ್ಲಿರಿಸಿ, ನ್ಯಾಯಾಲಯದ ಅನುಮತಿಯಿಲ್ಲದೆ ಜಿಸಿಐಡಿ ಟೆಕ್ನಾಲಜೀಸ್ ಕಚೇರಿಗೆ ಕರೆದೊಯ್ದಿದ್ದರು. ಅಲ್ಲಿ ಕೆಲವು ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಲು ಹಾಗೂ ಸಾಕ್ಷ್ಯಾಧಾರಗಳನ್ನು ನಾಶಪಡಿಸಲು ಒತ್ತಾಯಿಸಿದ್ದರು ಎಂಬ ಆರೋಪವಿದೆ.

ಅಲ್ಲದೆ, ಈ ಅವಧಿಯಲ್ಲಿ ಶ್ರೀಕಿಗೆ ಖಾಸಗಿ ಲ್ಯಾಪ್‌ಟಾಪ್ ನ್ನು ಮುಕ್ತವಾಗಿ ಬಳಸಲು ಅವಕಾಶ ನೀಡಲಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!