ಹೆಚ್. ಹನುಮಂತಪ್ಪ ನಿಧನ 
ರಾಜ್ಯ

ಇಂದಿರಾ ಗಾಂಧಿ ಆಪ್ತ ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ನಿಧನ!

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೊತೆ ಒಡನಾಟ ಹೊಂದಿದ್ದ ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 95 ವರ್ಷದ ಹನುಮಂತಪ್ಪ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೊತೆ ಒಡನಾಟ ಹೊಂದಿದ್ದ ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 95 ವರ್ಷದ ಹನುಮಂತಪ್ಪ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗಕ್ಕೆ ರವಾನಿಸಲಾಗುತ್ತದೆ. ನಾಳೆ ಚಿತ್ರದುರ್ಗದ ಮುಕ್ತಿಧಾಮದಲ್ಲಿ ಹನುಮಂತಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪುತ್ರ ಜಿ.ಹೆಚ್‌ ಮೋಹನ್‌ ತಿಳಿಸಿದ್ದಾರೆ.

ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕರು, ರಾಜ್ಯಸಭೆಯ ಮಾಜಿ ಸಂಸದರಾದ ಶ್ರೀ ಎಚ್. ಹನುಮಂತಪ್ಪ ಅವರ ಅಕಾಲಿಕ ನಿಧನದ ಸುದ್ದಿ ತೀವ್ರ ದುಃಖವನ್ನುಂಟು ಮಾಡಿದೆ. ಸಂಸದೀಯ ಮೌಲ್ಯಗಳನ್ನು ಎತ್ತಿಹಿಡಿದ ನಿಷ್ಠಾವಂತ ನಾಯಕ, ಜನಪರ ರಾಜಕಾರಣಿ ಹಾಗೂ ಸಮಾಜದ ಶೋಷಿತ ವರ್ಗಗಳ ಧ್ವನಿಯಾಗಿದ್ದ ಅವರ ಸೇವೆ ಸದಾ ಸ್ಮರಣೀಯ. ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರಿಗೆ, ಬಂಧು-ಬಳಗಕ್ಕೆ ಹಾಗೂ ಅಪಾರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿಕೆ ಹರಿಪ್ರಸಾದ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

11/9 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!

"ನಾಯಕತ್ವ ಮುಗಿದಿದೆ, ಜರ್ನಿ ಮುಂದುವರಿಯುತ್ತೆ": ಭಾವನಾತ್ಮಕ ಸಂದೇಶದೊಂದಿಗೆ captaincyಗೆ ಗುಡ್‌ಬೈ ಹೇಳಿದ Harmanpreet Kaur..!

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್

ಕಾಕ್‌ಪಿಟ್ ದಾಳಿ ಬಳಿಕ 150ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಫ್ಲೈದುಬೈ ವಿಮಾನವನ್ನು ಹೊಡೆದುರುಳಿಸಲು ಇಸ್ರೇಲ್ ಸಿದ್ಧವಾಗಿತ್ತು: ವರದಿ