KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ 
ರಾಜ್ಯ

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್

ಬೆಂಗಳೂರಿನ ಹೊರವಲಯದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿ ಸಿಕ್ಕಿಬಿದ್ದಿದ್ದಾನೆ.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನಿಗೆ ಬಸ್ ನಲ್ಲೇ ಧರ್ಮದೇಟು ನೀಡಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನ ಹೊರವಲಯದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿ ಸಿಕ್ಕಿಬಿದ್ದಿದ್ದಾನೆ. ನೆಲಮಂಗಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ.

ಘಟನೆಯನ್ನು ಕಣ್ಣಾರೆ ಕಂಡಿದ್ದೇನೆ ಎಂದು ಹೇಳಿಕೊಂಡಿರುವ ಪ್ರಯಾಣಿಕರೊಬ್ಬರು ಈ ಕುರಿತು ಮಾಹಿತಿ ನೀಡಿದ್ದು, ಗುಲಾಬಿ ಬಣ್ಣದ ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಟಾಪ್ ಧರಿಸಿದ್ದ ಯುವತಿಯನ್ನು ಪ್ರಯಾಣದ ವೇಳೆ ಪದೇ ಪದೇ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎನ್ನಲಾಗಿದೆ.

ಈ ಘಟನೆಯಿಂದ ಯುವತಿ ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದು, ಮೌನವಾಗಿ ಕಣ್ಣೀರು ಹಾಕುತ್ತಿದ್ದರೂ ಆರಂಭದಲ್ಲಿ ನಡೆದ ಘಟನೆ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಎಂದು ಹೇಳಲಾಗಿದೆ.

ಯುವತಿಯ ಪಕ್ಕದಲ್ಲೇ ಕುಳಿತಿದ್ದ ಮತ್ತೊಬ್ಬ ಮಹಿಳಾ ಪ್ರಯಾಣಿಕರು ಆಕೆ ಅಳುತ್ತಿರುವುದನ್ನು ಗಮನಿಸಿ ಏನಾಗಿದೆ ಎಂದು ವಿಚಾರಿಸಿದಾಗ, ತನ್ನನ್ನು ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸುತ್ತಿದ್ದಾನೆ ಎಂದು ಯುವತಿ ತಿಳಿಸಿದ್ದಾಳೆ.

ಇದನ್ನು ತಿಳಿದ ತಕ್ಷಣ ಮತ್ತೊಬ್ಬ ಮಹಿಳಾ ಪ್ರಯಾಣಿಕರು ಮಧ್ಯಪ್ರವೇಶಿಸಿ ಬಸ್ ಚಾಲಕರಿಗೆ ವಾಹನ ನಿಲ್ಲಿಸುವಂತೆ ಸೂಚಿಸಿದ್ದಾರೆ.

ಬಳಿಕ ಆರೋಪಿಯನ್ನು ಪ್ರಶ್ನಿಸಿದ್ದು, ಇತರ ಪ್ರಯಾಣಿಕರೂ ಯುವತಿಯ ಬೆಂಬಲಕ್ಕೆ ನಿಂತು ಘಟನೆ ಬಗ್ಗೆ ಕೆಎಸ್‌ಆರ್‌ಟಿಸಿ ನಿರ್ವಾಹಕರಿಗೆ ಮಾಹಿತಿ ನೀಡಿದ್ದಾರೆ.

ಆರೋಪಿಗೆ ಧರ್ಮದೇಟು

ಪ್ರಯಾಣಿಕರು ಆರೋಪಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಯುವತಿ ಆರೋಪಿಗೆ ಕಪಾಳಮೋಕ್ಷ ಮಾಡುವಂತೆ ಹೇಳಿದ್ದಾರೆ. ಈ ವೇಳೆ ಯುವತಿ ಆಕ್ರೋಶದಿಂದ ಆರೋಪಿಗೆ ಕಪಾಳಮೋಕ್ಷ ಮಾಡಿದ್ದಾಳೆ. ನಂತರ ನಿರ್ವಾಹಕರು ಆರೋಪಿಯ ಟಿಕೆಟ್ ಪಡೆದು, ನೆಲಮಂಗಲ ಟೋಲ್ ಸಮೀಪ ಬಸ್‌ನಿಂದ ಇಳಿಸಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದೆಯೇ ಎಂಬುದೂ ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!