ಡಿಕೆ ಶಿವಕುಮಾರ್ 
ರಾಜ್ಯ

ಯುವಕರಿಗೆ ಭರ್ಜರಿ ಗಿಫ್ಟ್: 10 ಸಾವಿರ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಸರ್ಕಾರ ಆದೇಶ; ಪ್ರತಿ ಸಂಘಕ್ಕೆ ₹10 ಲಕ್ಷ, ಯಾರೆಲ್ಲಾ ಅರ್ಹ?

ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6,000 ಸಂಘಗಳು, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 4,000 ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು: ಡಿಕೆ ಶಿವಕುಮಾರ್ ಅವರು ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಘೋಷಣೆ ಮಾಡಿದ್ದ, ರಾಜ್ಯದಲ್ಲಿ 10 ಸಾವಿರ ʻಭಾರತ್ ಜೋಡೋ ಯುವ ಸಂಘಗಳʼ ಸ್ಥಾಪನೆಗೆ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ.

ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6,000 ಸಂಘಗಳು, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 4,000 ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರತಿ ಸಂಘಕ್ಕೆ ಪ್ರತಿ ವರ್ಷ ತಲಾ 10 ಲಕ್ಷ ರೂ. ನಂತೆ 1,000 ಕೋಟಿ ರೂ. ಅನುದಾನ ನೀಡುವುದಾಗಿಯೂ ಸರ್ಕಾರ ತಿಳಿಸಿದೆ.

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ, ಸಾಮಾಜಿಕ ಸಾಮರಸ್ಯ ಉತ್ತೇಜಿಸಲು ಭಾರತ್ ಜೋಡೋ ಯುವ ಸಂಘಗಳ ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ವರ್ಷ ಪ್ರತಿ ಸಂಘಕ್ಕೆ 10 ಲಕ್ಷ ರೂ. ನಂತೆ 1,000 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ.

ಈ ಕುರಿತು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, "ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 10 ಸಾವಿರ ಭಾರತ್‌ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದೇವೆ " ಎಂದು ತಿಳಿಸಿದ್ದಾರೆ.

" ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಂಘ, ಪ್ರತಿಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ಪುರಸಭೆಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ನಗರಸಭೆಯಲ್ಲಿ ಸರಾಸರಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ಹಾಗೂ ಮಹಾನಗರ ಪಾಲಿಕೆ ಮತ್ತು ಜಿಬಿಎ ವ್ಯಾಪ್ತಿಯಲ್ಲಿ ಸರಾಸರಿ 10 ಸಾವಿರ ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಲು ಸೂಚನೆಯನ್ನು ನೀಡಿದ್ದೇವೆ " ಎಂದಿದ್ದಾರೆ.

ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಅನುಷ್ಠಾನ ಮಾಡಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿದೆ. ಭಾರತ್‌ ಜೋಡೋ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸಿ, ನಾಡಿನ ಸತ್ಪ್ರಜೆಗಳಾಗಿ ರೂಪಿಸುವುದು ನಮ್ಮ ಉದ್ದೇಶ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಸಂಘ ಸ್ಥಾಪನೆಗೆ ಯಾರೆಲ್ಲಾ ಅರ್ಹ?

ಈ ಸಂಘದ ಸದಸ್ಯರಾಗಲು ಕನಿಷ್ಠ 16 ವರ್ಷದಿಂದ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಅಂದರೆ ಯುವಕ ಯುವತಿಯರಿಗೆ ಮಾತ್ರ ಇಲ್ಲಿ ಅವಕಾಶ. ಇನ್ನೂ, ಪ್ರತಿ ಭಾರತ ಜೋಡೋ ಯುವ ಸಂಘದಲ್ಲಿ ಕನಿಷ್ಠ 100 ಜನ ಯುವ ಸದಸ್ಯರು ಇರಲೇಬೇಕು. ಅಪ್ಲಿಕೇಶನ್ ಹಾಕುವ ಯುವಕರು ಅದೇ ಗ್ರಾಮ ಪಂಚಾಯಿತಿ ಅಥವಾ ವಾರ್ಡ್‌ನ ನಿವಾಸಿಯಾಗಿರಬೇಕು. ಇದನ್ನು ಆರ್ಡಿನರಿ ರೆಸಿಡೆಂಟ್ ಅಂತ ಕರೆಯುತ್ತಾರೆ. ಒಬ್ಬ ವ್ಯಕ್ತಿ ಕೇವಲ ಒಂದು ಸಂಘದಲ್ಲಿ ಮಾತ್ರ ಸದಸ್ಯನಾಗಲು ಅರ್ಹನಾಗಿರುತ್ತಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Hormuz ಭದ್ರತೆಗೆ ಸರಕು ಸಾಗಣೆಯ ಮೇಲೆ ಶೇ.20 ಶುಲ್ಕ ಹೇರಿ': ಜಗತ್ತಿಗೆ ಮತ್ತೆ ಶಾಕ್ ಕೊಟ್ಟ Donald Trump, ಇರಾನ್ ಕೆಂಡಾಮಂಡಲ

ತೀವ್ರ ವಿರೋಧದ ಬೆನ್ನಲ್ಲೇ ಸಿಎಂ ಮಾಧ್ಯಮ ಕಾರ್ಯದರ್ಶಿ ರಾಘವೇಂದ್ರ ಭಟ್ ನೇಮಕಾತಿ ವಾಪಸ್: ರಾಜ್ಯ ಸರ್ಕಾರ ಆದೇಶ

ಗಂಭೀರ್ ಒಬ್ಬರನ್ನೇ ಟೀಕಿಸುವುದು ಸರಿಯಲ್ಲ; ಆ ಇಬ್ಬರು ಆಟಗಾರರಿಂದಲೇ ದೊಡ್ಡ ಹೊಡೆತ: ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ MSK Prasad

2020 ದೆಹಲಿ ಗಲಭೆ ಕೇಸ್: IB ಅಧಿಕಾರಿ ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ AAP ನಾಯಕ ತಾಹೀರ್ ಹುಸೇನ್ ದೋಷಿ!

ನಾಗಾಲ್ಯಾಂಡ್‌: ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ IED ಸ್ಫೋಟ; ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ!